ಬೆಂಗಳೂರು (Bengaluru): ಸಾಕಷ್ಟು ಒತ್ತಡ ಹಾಗೂ ನಿರೀಕ್ಷೆಗಳ ಬೆನ್ನಲ್ಲೇ ಜಾತಿಗಣತಿ ವರದಿ ಸ್ವೀಕರಿಸಲು ಕಾಲ ಕೂಡಿಬಂದಿದ್ದು, ಇಂದು ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ (Caste Census Report) ಸಲ್ಲಿಸುವ ಸಾಧ್ಯತೆ ಇದೆ.
ಜಾತಿಗಣತಿ ವರದಿ ಸ್ವೀಕರಿಸುವಂತೆ ಕಳೆದ ಕೆಲವು ದಿನಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರಿಗೆ ಹಲವು ರಾಜಕೀಯ ನಾಯಕರು, ಗಣ್ಯರು ಒತ್ತಾಯ ಮಾಡಿದ್ದರು.
ಈ ನಡುವೆ ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಆಯೋಗದ ಅಧ್ಯಕ್ಷರು ಬುಧವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಗುರುವಾರ(ಇಂದು) ರಾಜ್ಯ ಸರ್ಕಾರಕ್ಕೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಜಾತಿಗಣತಿ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿ ಬಗ್ಗೆ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದು, ಬಳಿಕ ರಾಜ್ಯ ಸರ್ಕಾರಕ್ಕೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿ ನೀಡಲು ಮುಂದಾಗಿದ್ದರು.
#karnataka #bengaluru #siddaramaiah #casteCensusReport #congressgovt