• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD Kumarswamy: ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 20, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

15 ದಿನದಲ್ಲಿ ಆರೂವರೆ ಕೋಟಿ ಜನರ ಸಮೀಕ್ಷೆ ಹೇಗೆ ಸಾಧ್ಯ? ಸಮೀಕ್ಷೆ ನಡೆಸುವ ಸಿಬ್ಬಂದಿಗೆ ನವರಾತ್ರಿ ಹಬ್ಬ ಇಲ್ಲವೇ ಎಂದು ಪ್ರಶ್ನೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು ಎಂದ ಸಚಿವರು.

ADVERTISEMENT

ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ  ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ.

Tags: chief minister hd kumaraswamycm hd kumaraswamydk shivakumar vs hd kumaraswamydk shivakumar vs hd kumarswamyhd kumaraswam nose bleedHD Kumaraswamyhd kumaraswamy bhavani revannahd kumaraswamy dk shivakumarhd kumaraswamy newshd kumaraswamy on bjp congresshd kumaraswamy on dk shivakumarhd kumaraswamy press meet livehd kumaraswamy todays newshd kumaraswamy vs dk shivakumarhd kumarswamyhd kumarswamy vs dk shivakumarkarnataka cm hd kumaraswamymp kumarswamy
Previous Post

KJ George: ಕೌಶಲ ತರಬೇತಿ ಕೇಂದ್ರಕ್ಕೆ ಸಚಿವ ಜಾರ್ಜ್‌ ನೆರವು

Next Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada