ಮಂಗಳೂರಿನಲ್ಲಿ ಜನವರಿ 21ರಂದು ಆಯೋಜಿಸಿದ್ದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
![](https://pratidhvani.com/wp-content/uploads/2024/01/WhatsApp-Image-2024-01-15-at-22.43.43-jpeg.webp)
ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ಸಮಾವೇಶವನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಸಮಾವೇಶ ನಡೆಸುವ ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು. ಆದ್ದರಿಂದ ಈ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಗಳನ್ನು ಹಾಗೆಯೇ ಮುಂದುವರಿಸಬೇಕಾಗಿ ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.