ಭಾನುವರಾ ತಡರಾತ್ರಿ ಆಸ್ಪತ್ರೆಗೆ ವಿದ್ಯುತ್ ಸಂಪರ್ಕ ಕಡಿತವಾದ ಕಾರಣ 4 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಡೆದಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು ಸುಮಾರು 4 ಘಂಟೆಗೂ ಹೆಚ್ಚು ಕಾಲ ವಿದ್ಯುತ್ ಸಂಪರ್ಕ ಕಿತವಾಗಿದ್ದ ಕಾರಣ ಶಿಶುಗಳು ಮೃತಪಟಿವೆ ಎಂದು ತಿಳಿದು ಬಂದಿದೆ.
ಆಸ್ಪತ್ರೆ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ ಡಿಯೋ ತನಿಖೆಗೆ ಆದೇಶಿಸಿದ್ದು ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.