• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಯಾವುದೇ ಕ್ಷೇತ್ರದಲ್ಲೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು, ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ADVERTISEMENT

ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು.

ನಾವು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು. ತಂದೆ, ತಾಯಿ, ಶಿಕ್ಷಕರ ಕನಸನ್ನು ನನಸಾಗಿಸಬೇಕು. ಪ್ರತಿಯೊಂದಕ್ಕೂ ಗುರಿ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಕ್ಕಳ ರಕ್ಷಣೆಗೆ, ಮಕ್ಕಳ ಹಕ್ಕುಗಳನ್ನು ಕಾಪಾಡಲು ಸರ್ಕಾರ ಸಿದ್ಧವಿದೆ. ಸರ್ಕಾರ ಯಾವಾಗಲೂ ಮಕ್ಕಳ ಜೊತೆಗಿರುತ್ತದೆ. ಜಾತ್ಯಾತೀತವಾಗಿ, ಸುಶಿಕ್ಷಿತರಾಗಿ, ಸಂವಿಧಾನ ‌ಆರಾಧಕರಾಗಿ ಬೆಳೆಯಬೇಕು ಎಂದು ಸಚಿವರು ಕರೆ ನೀಡಿದರು. ನಾನು ಏಳನೇ ತರಗತಿಗೆ ಬರುವವರೆಗೂ ನನ್ನ ಜಾತಿ ಯಾವುದು ಎಂದು ಗೊತ್ತಿರಲಿಲ್ಲ. ನಾನು ಶಾಲೆಯಲ್ಲಿ ಕಲಿಯುವಾಗ ಪ್ರಸಿದ್ಧರೊಬ್ಬರ ಭಾಷಣದಿಂದ ಪ್ರೇರಿತಳಾದೆ. ಅವರ ಭಾಷಣ ನನ್ನ ಮೇಲೆ ಸಾಕಷ್ಟು ಪರಿಣಾಮ ಬೀರಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮೊಬೈಲ್ ನಿಂದ ದೂರ ಇರಿ
ಮಕ್ಕಳ ಪಾಲಿಗೆ ಮೊಬೈಲ್ ಎಂಬುದು ಸಾಮಾಜಿಕ ಪೀಡುಗಾಗಿದೆ. ಅದು ಕೇವಲ ಶಿಕ್ಷಕರ ಹೊಣೆಯಲ್ಲ. ಮನೆಯಲ್ಲಿ ಪಾಲಕರು ಮಕ್ಕಳು ಮೊಬೈಲ್ ಬಳಸದಂತೆ ನಿಗಾವಹಿಸಬೇಕು. ಮೊಬೈಲ್ ನಿಂದ ಮಕ್ಕಳು ದೂರ ಇದ್ದರಷ್ಟೂ ಎತ್ತರಕ್ಕೆ ಬೆಳೆಯುತ್ತಾರೆ ಎಂದರು.

ಅಪೌಷ್ಟಿಕತೆ ಹೋಗಲಾಡಿಸಲು ಹೋರಾಟ
ಕರ್ನಾಟಕದ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಹೋರಾಟವನ್ನೇ ಮಾಡುತ್ತಿದೆ. 1999ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಯೋಜನೆಯನ್ನು ಜಾರಿಗೆ ತಂದರು. ಬಳಿಕ 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಶಾಲಾ‌ ಮಕ್ಕಳಿಗೆ ಮೊಟ್ಟೆ ಹಾಗೂ ಹಾಲು ನೀಡಲಾಗುತ್ತಿದೆ ಎಂದರು.

ಇದಕ್ಕೂ ಮೊದಲು ಇಂದಿರಾ ಗಾಂಧಿಯವರು 1975 ರಲ್ಲಿ ಬಡ ಮಕ್ಕಳಿಗೂ ಅಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಸಿಗುವ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದರು. ಕರ್ನಾಟಕದಲ್ಲಿ ಇಂದು 35 ಲಕ್ಷ ಮಕ್ಕಳು ಅಂಗನವಾಡಿ ಯಲ್ಲಿ ಕಲಿಯುತ್ತಿದ್ದಾರೆ ಎಂದು ಸಚಿವರು ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದರು.

ನಿಶ್ಚಿತಾರ್ಥ ಮಾಡಿದರೂ ಕ್ರಮ
ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ‌ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ ‌ 25 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು ಎಂದ ಸಚಿವರು, ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗಾಗಿಯೇ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆಗೆ ಬದ್ಧ
ಮಕ್ಕಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಚುನಾವಣೆ ಕೆಲಸಗಳಿಂದ ಮುಕ್ತಿಕೊಡಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಿದ್ದಾರೆ. ರಾಜ್ಯಾದ್ಯಂತ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, 50,000 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ನಾನು ಸಚಿವೆಯಾದ ಬಳಿಕ ಕಳೆದ ಎರಡೂವರೆ ವರ್ಷಗಳಲ್ಲಿ 200 ಕೋಟಿ ರೂಪಾಯಿಗಳನ್ನು ಅಂಗನವಾಡಿ ಕಟ್ಟಡಗಳಿಗೆ ಮೀಸಲಿಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಕ್ಕಳ ರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ
ಮಕ್ಕಳ ರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ. ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಅಲ್ಲ, ಶಿಕ್ಷಣ, ಕಂದಾಯ, ಆರೋಗ್ಯ, ಗೃಹ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಒಗ್ಗೂಡಿ ಮಕ್ಕಳ ಹಿತರಕ್ಷಣೆ ಬದ್ದವಾಗಬೇಕು ಎಂದರು.

ಸುಮಾರು‌ 2 ಗಂಟೆಗಳ ಕಾಲ ನಡೆದ ಸಂವಾದ
ರಾಜ್ಯಾದ್ಯಂತ ನಾಲ್ಕು ವಿಭಾಗಗಳಿಂದ ಸುಮಾರು 120 ಶಾಲಾ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು. ಸುಮಾರು‌ ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ಸಚಿವರ ಬಳಿ ವಿವಿಧ ಪ್ರಶ್ನೆಗಳನ್ನು ಕೇಳುವ ಮೂಲಕ ಗಮನಸೆಳೆದರು. ಇಂದು ವಿಶ್ವ‌ ಮಕ್ಕಳ ದಿನದ ಅಂಗವಾಗಿ ಮಕ್ಕಳೊಂದಿಗೆ ಸಚಿವರು ಸಂವಾದ ನಡೆಸಿದರು.

ಈ ವೇಳೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಎಸ್. ಕೋಸುಂಬೆ, ಸಿವಿಕ್ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ನ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್.ನಿಶ್ಚಲ್, ಎಂ.ಎ.ವಾಸುದೇವ ಶರ್ಮ, ಕೆ.ಟಿ.ತಿಪ್ಪೇಸ್ವಾಮಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Lakshmi hebbalkarlakshmi hebbalkar addresslakshmi hebbalkar congress newslakshmi hebbalkar interviewlakshmi hebbalkar latest newslakshmi hebbalkar livelakshmi hebbalkar newslakshmi hebbalkar press meetlakshmi hebbalkar speechlakshmi hebbalkar statementlakshmi hebbalkar today newslakshmi hebbalkar videoMinister Lakshmi Hebbalkar
Previous Post

“ಕೊರಗಜ್ಜ”ಚಿತ್ರದ “ಗುಳಿಗ ಗುಳಿಗ” ಹಾಡಿನ ಭೋರ್ಗರೆತದ ಅಬ್ಬರ ಶುರು..!!

Next Post

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

Related Posts

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
0

ಕುಂದಾಪುರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಯಕ್ಷಗಾನ ಕಲಾವಿದರೊಬ್ಬರು ಕೂಡ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೌಡದಲ್ಲಿ ನಡೆದಿದೆ....

Read moreDetails
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

November 21, 2025
Next Post

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

Recent News

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ
Top Story

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!