• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ, ರಂಜಾನ್ ಶುಭಾಶಯದ ಜತೆಗೆ ಆಹಾರ ಕಿಟ್ ವಿತರಣೆ ಮಾಡಿದ ಸಚಿವ‌ ಕೆ.ಜೆ. ಜಾರ್ಜ್..

ಪ್ರತಿಧ್ವನಿ by ಪ್ರತಿಧ್ವನಿ
March 3, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Share on WhatsAppShare on FacebookShare on Telegram

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ವೇಗವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ‌

ADVERTISEMENT

 

ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ಯೋಜನೆಗಳು ಮತ್ತು ಸಂಚಾರ ದಟ್ಟಣೆ ನಿರ್ವಹಣೆ ಸಂಬಂಧ ಚರ್ಚೆ ನಡೆಸುತ್ತ ಸ್ಥಳೀಯ ಜನರನ್ನು ಮಾತನಾಡಿಸುತ್ತಾ ಸಚಿವ ಜಾರ್ಜ್ ಅಧಿಕಾರಿಗಳಿಗೆ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳನ್ನು ಪಾದಯಾತ್ರೆ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜನರೊಂದಿಗೆ ಗೌರವಯುತವಾಗಿ ವರ್ತಿಸಿ,ಅವರಿಗಿ ಘನತೆಯ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ ಎಂದು ಜಾರ್ಜ್‌ ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

May be an image of one or more people

ಜೀವನಹಳ್ಳಿ ವ್ಯಾಪ್ತಿಯಲ್ಲಿ ಅಗಸ ವೃತ್ತಯಲ್ಲಿ ತೊಡಗಿರುವ ಜನರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣ ನಿರ್ಮಿಸಿದ್ದು, ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಸಿದ್ದಪಡಿಸುವಂತೆ ಸೂಚಿಸಿದ್ದಾರೆ. ಇದೇ ವೇಳೆ ಮುದ್ದಪ್ಪ ಗಾರ್ಡನ್ , ಚೆಟ್ಟಪ್ಪ ಗಾರ್ಡನ್ ಮತ್ತು ಗ್ಯಾಂಗ್‌ಮನ್ ಕ್ವಾಟ್ರರ್ಸ್ನಲ್ಲಿ ನಿರ್ಮಿಸಿರುವ ಮನೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಶೀಘ್ರದಲ್ಲೇ ಸೂರು ಭಾಗ್ಯದ ಭರವಸೆ ನೀಡಿದ ಜಾರ್ಜ್..

ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಕೈಗೊಂಡಿರುವ ಬಹುಮಹಡಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಇನ್ನಷ್ಟು ಮನೆಗಳನ್ನು ನಿರ್ಮಿಸಿಕೊಡುವಂತೆ ಕೇಳಿಕೊಂಡ ಮಹಿಳೆಯರಿಗೆ ಹೊಸದಾಗಿ ಮನೆಗಳನ್ನು ಕಟ್ಟಲಿದ್ದು ಆದ್ಯತೆಯ ಮೇರೆಗೆ ನೀಡಲಾಗುವುದು ಎಂದು ಜಾರ್ಜ್ ಭರವಸೆ ನೀಡಿದ್ದಾರೆ.

ಅಲ್ಲದೆ ಕೊಕ್ ಟೌನ್ ನಿವಾಸಿಗಳ ಸಂಘದವರ ಜತೆಗೆ ಹೈಸ್ಟ್ರೀಟ್ ಉದ್ಯಾನದಲ್ಲಿ ಸಭೆ ನಡೆಸಿ, ನಿವಾಸಿಗಳ ಬೇಡಿಕೆಗಳನ್ನು ಆಲಿಸಿ ಹಳೆಯ ಮತ್ತು ಕೆಟ್ಟಿರುವ ಟ್ರಾನ್ಸ್‌ಫಾರ್ಮರ್‌ಗಳನ್ನುಮಾರ್ಚ್‌ ಅಂತ್ಯದೊಳಗೆ ಬದಲಾಯಿಸಲು ಜಾರ್ಜ್ ಸೂಚನೆ ನೀಡಿದ್ದಾರೆ. ಶಾಸಕರ ಅನುದಾನದಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಹತ್ತಿರದ ಪೊಲೀಸ್‌ ಠಾಣೆಯಿಂದ ನಿಗಾವಹಿಸುವಂತೆ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

May be an image of one or more people, temple and text

ಜೀವನಹಳ್ಳಿಯಲ್ಲಿ ಕೇಳಚಂದ್ರ ಫೌಂಡೇಷನ್ ವತಿಯಿಂದ ನಡೆಸಲಾಗುತ್ತಿರುವ ಕೌಶಲ್ಯ ಕೇಂದ್ರಕ್ಕೆ ತೆರಳಿ, ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಮಾತನಾಡಿಸಿ. ಕೌಶಲ್ಯ ಕೇಂದ್ರಕ್ಕೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಕೇಂದ್ರದ ಮುಖ್ಯಸ್ಥರಿಗೆ ಭರವಸೆ ನೀಡಿದ್ದಾರೆ.‌

ಮಕ್ಕಳೊಂದಿಗೆ ಸಮಯ ಕಳೆದ ಸಚಿವ ಜಾರ್ಜ್..

ಸತ್ಯನಗರದಲ್ಲಿ ಎಂಬೆಸ್ಸಿ ಗಾಲ್ಫ್ ಲಿಂಕ್ಸ್ ಬ್ಯುಸಿನೆಸ್ ಪಾರ್ಕ್‌ನ ಆರ್ಥಿಕ ಬೆಂಬಲದೊಂದಿಗೆ ನಡೆಸಲಾಗುತ್ತಿರುವ ಅಂಗನವಾಡಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಚಿವ ಕೆ.ಜೆ ಜಾರ್ಜ್ ಮಕ್ಕಳೊಂದಿಗೆ ಕೆಲಕಾಲ ಮಾತುಕತೆ ನಡೆಸಿ ಸಮಯ ಕಳೆದಿದ್ದಾರೆ.

ಇನ್ನೂ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಮ್ಮನಹಳ್ಳಿಯಲ್ಲಿ ರಂಜಾನ್ ಆಚರಣೆಯಲ್ಲಿರುವ ಮುಸ್ಲೀಮರ ಜತೆಗೆ ಮಧ್ಯಾಹ್ನದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದ್ದಾರೆ.

ಸ್ಥಳೀಯ ಮುಖಂಡರಾದ ಬಾಬಾ ಅಲಿಖಾನ್ ನೇತೃತ್ವದಲ್ಲಿ ಆಯೋಜಿಸಿದ್ದ ಆಹಾರ ಕಿಟ್ ವಿತರಣೆಯಲ್ಲಿ ಭಾಗವಹಿಸಿ, ನೆರೆದಿದ್ದ ನೂರಾರು ಮಹಿಳೆಯರಿಗೆ ಕಿಟ್‌ಗಳನ್ನು ವಿತರಿಸಿದರು.  ಈ ವೇಳೆ ಕ್ಷೇತ್ರದ ಮುಖಂಡರಾದ ರಘು ದೇವರಾಜ್, ಚಕ್ರವರ್ತಿ, ಆಶಾ, ರೂಪ ಮತ್ತು ಸಚಿವರ ವಿಶೇಷಾಧಿಕಾರಿಗಳು, ಜಿಬಿಎ, ಬೆಂಗಳೂರು ಜಲ ಮಂಡಳಿ, ಬೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Tags: Basic NeedsBenglore newscongress karnatakaGardensK J GeorgeKarnataka GovernmentKarnataka PoliticsListening PublicpowerPower ministerPratidhvaniRoadsSarvagna Nagar MLA
Previous Post

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

Next Post

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada