ಪೆಟ್ರೋಲ್ , ಡೀಸೆಲ್ ,ಗ್ಯಾಸ್, ತರಕಾರಿ ಬೆಲೆ ಏರಿಕೆ ಬೆನ್ನಲೆ ಇದೀಗ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲಿದೆ.
ಬೆಲೆ ಏರಿಕೆ ಬಿಸಿ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು. ಇದರಿಂದ ಜನರಿಗೆ ಮತ್ತಷ್ಟು ಬರೆ ಬೀಳಲಿದೆ.