ಇಸ್ಲಮಾಬಾದ್: ಭಾರತದ ಹೃದಯ ಭಾಗ ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ ಸಂಭವಿಸಿದ ಮರು ದಿನವೇ ಪಾಕಿಸ್ತಾನದಲ್ಲಿಯೂ ಭಾರೀ ಪ್ರಮಾಣದ ಸ್ಫೋಟವೊಂದು ಸಂಭವಿಸಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಜಿ -11 ಸೆಕ್ಟರ್‌ನಲ್ಲಿರುವ ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಇಂದು ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಸ್ಫೋಟ ಸಂಭವಿಸಿದ್ದು, 12 ಜನರು ಸಾವನ್ನಪ್ಪಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಜನಸಂದಣಿಯಿದ್ದ ಪ್ರದೇಶದಲ್ಲಿ ನಿಗೂಢವಾಗಿ ಸಂಭವಿಸಿದ ಈ ಸ್ಫೋಟದಲ್ಲಿ ಅನೇಕರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಸ್ಫೋಟವು ಭಯೋತ್ಪಾದಕ ದಾಳಿ ಎಂದು ಶಂಕಿಸಲಾಗುತ್ತಿದ್ದು, ಪಾಕಿಸ್ತಾನದ ಪ್ರಮುಖ ಪ್ರದೇಶಗಳಲ್ಲಿ, ಜನಸಂದಣಿ ಸ್ಥಳಗಳಲ್ಲಿ, ಪ್ರವಾಸೋದ್ಯಮ ಸ್ಥಳಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಸ್ಫೋಟದ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳು ಸುದ್ದಿ ಹಂಚಿಕೊಂಡಿದ್ದು, ಅಧೀಕೃತ ಮಾಹಿತಿಗಳು ಇನ್ನಷ್ಟೇ ಹೊರ ಬೀಳಬೇಕಿದೆ.

