ಕಳೆದ ವಾರ ಮೈಸೂರಿನ ಉದಯಗಿರಿಯಲ್ಲಿ (Mysuru udayagiri riots) ಪೊಲೀಸ್ ಸ್ಟೇಷನ್ ಮೇಲೆ ಕಲ್ಲು ತೂರಾಟ ನಡೆಸಿ, ಗಲಭೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad joshi) ಪ್ರತ್ರಿಕ್ರಿಯಿಸಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿದ್ದಾರೆ.

ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಕೇಂದ್ರ ನನಗೆ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಗಲಭೆಗೆ ಎಲ್ಲ ತಯಾರಿ ಮಾಡಿಕೊಂಡಿದ್ದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಹುಬ್ಬಳ್ಳಿ PFI ಗಲಭೆ ಕೇಸ್ ಗೆ ಸಂಬಂಧಪಟ್ಟಂತೆ ಪ್ರಕರಣಗಳನ್ನು ಹಿಂಪಡೆದಿರುವುದು ಮತ್ತೆ ಮತ್ತೆ ಈ ರೀತಿ ಕೃತ್ಯಗಳಿಗೆ ಕುಮ್ಮಕ್ಕು ಸಿಗುವಂತೆ ಪ್ರೇರೇಪಿಸಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಹಾಗೆ ಆ ಸಮಾಜದವರು ವರ್ತಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಇದೆಲ್ಲವೂ ಅವರಿಗೆ ಸಾಧ್ಯವಾಗಿದೆ ಎಂದು ಕಿಡಿಕಾರಿದ್ದಾರೆ.