ಮೈಸೂರು: ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್‌ಗೆ ಹಿಂದಿರುಗಿದರು.
ಪ್ರಹ್ಲಾದ್ ಮೋದಿ ಹಾಗೂ ಅವರ ಕುಟುಂಬ ಸದಸ್ಯರು ಬಂಡೀಪುರಕ್ಕೆ ತೆರಳುವ ಸಂದರ್ಭದಲ್ಲಿ ಕಡಕೋಳ ಬಳಿ ಸಮೀಪಿಸಿದ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಾಳುಗಳನ್ನ ನಗರದ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಗಾಯಾಳುಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯ ಆರೋಗ್ಯದಲ್ಲಿ ಏರುಪೇರಾದ ಬೆನ್ನಲ್ಲೇ ಪ್ರಹ್ಲಾದ್ ಮೋದಿ ಹಾಗೂ ಕುಟುಂಬ ಸದಸ್ಯರು ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್‌ಗೆ ಹಿಂದಿರುಗಿದರು.
ಮೈಸೂರು ವಿಮಾನ ನಿಲ್ದಾಣದಿಂದ ಅಹಮದಾಬಾದ್‌ಗೆ ತೆರಳಲು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ವಿಶೇಷ ವಿಮಾನ ವ್ಯವಸ್ಥೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಮೈಸೂರು ವಿಮಾನ ನಿಲ್ದಾಣದಿಂದ ಅಹ್ಮದಾಬಾದ್‌ಗೆ ತೆರಳಿದರು.