ಪಾಟೀದಾರ್ ಸಮುದಾಯದ ಪ್ರಬಲ ನಾಯಕ ಹಾಗೂ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹಗಳಿಗೆ ಪ್ರತಿಕ್ರಿಯಿಸಿದ ಹಾರ್ದಿಕ್, ನನಗೆ ಅಂತಹ ಯಾವುದೇ ಆಲೋಚನೆಗಳಿಲ್ಲ ಆದರೆ, ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನವಿದೆ ಎಂದು ಹೇಳಿದ್ದಾರೆ.
ಜನರು ನನ್ನ ಬಗ್ಗೆ ಸಾಕಷ್ಟು ವಿಷಯಗಳನ್ನು ಹೇಳುತ್ತಾರೆ ಯುಎಸ್ ಚುನಾವಣೆಯಲ್ಲಿ ಜೋ ಬಿಡೆನ್ ಗೆಲುವು ಸಾಧಿಸಿದಾಗ ನಾನು ಅವರನ್ನು ಹೊಗಳಿದ್ದೆ ಏಕೆಂದರೆ ನಮ್ಮ ಭಾರತೀಯರು ಉಪಾಧ್ಯಕ್ಷರಾಗಿದ್ದರಿಂದ ನಾನು ಅವರನ್ನು ಹೊಗಳಿದರೆ ನಾನು ಅವರ ಪಕ್ಷಕ್ಕೆ ಸೇರುತ್ತೇನಾ ಎಂದು ಪ್ರಶ್ನಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಾರ್ದಿಕ್ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರವ್ನು ಹಾಡಿ ಹೊಗಳುತ್ತಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಹಾರ್ದಿಕ್ ಪ್ರತಿ ಸ್ಪರ್ಧಿ ಉತ್ತಮವಾದ ನಿರ್ಧಾರಗಳನ್ನು ತೆಗೆದುಕೊಂಡರೆ ನಾವು ಅದರ ಬಗ್ಗೆ ಯೋಚಿಸಬೇಕಾಗುತ್ತದೆ ಅದು ಬಿಟ್ಟು ಸಮಯ ಹಾಳು ಮಾಡಿದರೆ ಜನ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಅನೇಕ ಯುವ ಪ್ರತಿಭೆಗಳು ಇದ್ದಾರೆ ಅಂತಹವರಿಗೆ ಅವಕಾಶ ಸಿಗಬೇಕು ಅದು ಬಿಟ್ಟು ಅಧಿಕಾರ ಅನುಭವಿಸಿದವರಿಗೆ ಮಾತ್ರ ಪುನಃ ಅಧಿಕಾರ ಸಿಗುತ್ತಿದೆ ಎಂದು ರಾಜ್ಯ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮತ್ತೊಮ್ಮೆ ಟೀಕಿಸಿದ್ದಾರೆ. ಚುನಾವಣೆ ಸಮೀಪಿಸಿತ್ತಿದೆ ಇಂತಹ ಸಮಯದಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಮತ್ತು ಎಲ್ಲರಿಗೂ ಒಂದೊಂದು ರೀತಿಯ ಜವಾಬ್ದಾರಿಯನ್ನು ವಹಿಸಬೇಕು ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದ ಯುವಕರಿಗೆ ಹೆಚ್ಚು ಆದ್ಯತೆ ನೀಡಬೇಕು ರಾಜ್ಯಾದ್ಯಂತ ನಾವು ಸಂಘಟಿತರಾಗಿ ಹೋರಾಡಬೇಕು ಎಂದು ಸಲಹೆ ನೀಡಿದ್ದಾರೆ.