• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ

Any Mind by Any Mind
January 3, 2022
in ಸಿನಿಮಾ
0
ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್‌ ಎಂದೇ ಹೆಸರಾದ ಪ್ರಜ್ವಲ್ ದೇವರಾಜ್ ಈಗ ತಮ್ಮ ಅಭಿನಯದ ಅರ್ಜುನ್ ಗೌಡ ಚಿತ್ರದ ಬಿಡುಗಡೆಯ ಸಮಯದಲ್ಲೇ ಹೊಸದೊಂದು ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ.

ADVERTISEMENT

ಪ್ರಜ್ವಲ್ ದೇವರಾಜ್ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಅಲ್ಲದಿದ್ದರೂ, ಮಿನಿಮಮ್ ಗ್ಯಾರಂಟಿ ಹೀರೋ ಎಂಬ ಪಟ್ಟವನ್ನಂತೂ ಗಳಿಸಿದ್ದಾರೆ. ಅವರ ಚಿತ್ರಗಳು ಅಂದ್ರೆ ಸೆಟಲೈಟ್ ರೈಟ್ಸ್ ಗಳಿಗೆ ಮೋಸವಿಲ್ಲ ಎಂಬ ಮಾತು ಸ್ಯಾಂಡಲ್ ವುಡ್ ನಲ್ಲಿ ಚಾಲ್ತಿಯಲ್ಲಿದೆ. ಹಾಗಾಗಿ ಅವರ ಕೈಯಲ್ಲಿ ಸದಾ ಸಿನಿಮಾಗಳು ಇದ್ದೇ ಇರುತ್ತವೆ. ಅವರ ಹಿಂದಿನ ಚಿತ್ರಗಳ ಫಲಿತಾಂಶ ಸಿಹಿಯೋ, ಕಹಿಯೋ, ಆದರೆ, ಪ್ರಜ್ವಲ್ ಮಾತ್ರ ಬಿಡುವಿಲ್ಲದಂತೆ ಅವರು ಹೊಸ ಚಿತ್ರಗಳಿಗೆ ಸಹಿ ಹಾಕುತ್ತಲೇ ಇರುತ್ತಾರೆ.

ಈಗ ಪ್ರಜ್ವಲ್ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭ ಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾದ್ ಅವರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Tags: ಅರ್ಜುನ್ ಗೌಡಆದರೆಕಹಿಯೋಪ್ರಜ್ವಲ್ಪ್ರಜ್ವಲ್ ದೇವರಾಜ್ಸಿಹಿಯೋಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್‌ ಎಂದೇ ಹೆಸರಾದ ಪ್ರಜ್ವಲ್ ದೇವರಾಜ್ ಈಗ ತಮ್ಮ ಅಭಿನಯದ ಅರ್ಜುನ್ ಗೌಡ ಚಿತ್ರದ ಬಿಡುಗಡೆಯ ಸಮಯದಲ್ಲೇ ಹೊಸದೊಂದು ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ.
Previous Post

ದೆಹಲಿಯಲ್ಲಿ ಓಮಿಕ್ರಾನ್ ಹೆಚ್ಚಳ : 4,000 ಹೊಸ ಕೋವಿಡ್ ಪ್ರಕರಣ ಪತ್ತೆ

Next Post

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada