ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ದೂರಿನಲ್ಲಿ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ.

ಸದ್ಯ ವೈರಲ್ ಆಗಿರುವ ವಿಡಿಯೋಗಳಲ್ಲಿನ ಐದಾರು ಸಂತ್ರಸ್ತೆಯರನ್ನು ಎಸ್ಐಟಿ ತಂಡ ಗುರುತಿಸಿದೆ. ಅಲ್ಲದೇ ಬೆಂಗಳೂರಿನಲ್ಲಿರುವ ಸಿಐಡಿ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆ ನಡೆಸಿ ಮಹತ್ವದ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ.

ಎಸ್ಐಟಿ ತಂಡದಲ್ಲಿರುವ ಎಸ್ಪಿ ಸೀಮಾ ಲಾಟ್ಕರ್ ಅವರು ಎದುರು ಸಂತ್ರಸ್ತೆಯರು ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅಧಿಕಾರಿ, ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ. ಅಥವಾ ಸಂತ್ರಸ್ತೆಯರು ಖುದ್ದು ಎಸ್ ಐಟಿ ಎದುರು ವಿಚಾರಣೆಗೆ ಹಾಜರಾಗಿರಬಹುದು ಎಂದು ಕೂಡ ಶಂಕಿಸಲಾಗಿದೆ.






