ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣರ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆರ್ ಕೂಡ ಆಗಿದ್ದಾಗಿದೆ.

ನಾಳೆ ಭಾರತಕ್ಕೆ ಆಗಮಿಸುತ್ತಿರುವ ಪ್ರಜ್ವಲ್ ರೇವಣ್ಣರ ಬಂಧನಕ್ಕೆ ಎಸ್‌ಐಟಿ ತಂಡ ಮುಂದಾಗಿದ್ದು, ಮಹತ್ವದ ಬೆಳವಣಿಗೆಯಲ್ಲಿ ಇಙದು ಮಧ್ಯಾಹ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಪ್ರಜ್ವಲ್ ನಿರೀಕ್ಷಣಾ ಜಾಮೀನಿನ ಅರ್ಜಿಯನ್ನು ವಕೀಲರ ಮೂಲಕ ಸಲ್ಲಿಸಿದ್ದು, ನಿರೀಕ್ಷಣಾ ಜಾಮೀನಿಗೆ ಮನವಿ ಮಾಡಿದ್ದಾರೆ.