ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ನ್ಯಾಯಮೂರ್ತಿಗಳಾದ ಕೆ.ಎಸ್ ಮುದಗಲ್ ಮತ್ತು ಟಿ ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಪ್ರಜ್ವಲ್ 2024ರ ಏಪ್ರಿಲ್ ತಿಂಗಳಿನಲ್ಲಿ ವಿದೇಶಕ್ಕೆ ತೆರಳಿದಾಗ ಯಾವುದೇ ಕೇಸ್ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ಥೆಯನ್ನು ಇಲ್ಲಿನ ರಾಜ್ಯ ಸರ್ಕಾರ ಬಳಸಿ ಕೇಸ್ ದಾಖಲಿಸಿದೆ. 2019, 2021 ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023 ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಎನ್ನುವಂತಹ ಪ್ರಮುಖ ಅಂಶಗಳನ್ನು ಮುಂದಿಟ್ಟು ವಾದ ಮಂಡಿಸಿದರು. ಅಂತಿಮವಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.














