ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್ ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕಸ್ಟಡಿ ಸಮಯ ಇಂದು ಅಂತ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆ ದೆ. ಅಲ್ಲದೇ, ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರತಿ ಪ್ರಕರಣದ ತನಿಖೆಯನ್ನೂ ಪ್ರತ್ಯೇಕವಾಗಿ ಅಧಿಕಾರಿಗಳು ನಡೆಸುತ್ತಿದ್ದಾರೆ.
ಈಗಾಗಲೇ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ವೇಳೆ ನಡೆಸಲಾಗಿದೆ. ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿದೆ. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದೆ. ಇನ್ನುಳಿದ ಎರಡು ಕೇಸ್ ತನಿಖೆ ಇನ್ನು ಮುಂದೆ ಎಸ್ ಐಟಿ ಅರಂಭಿಸಲಿದೆ. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರು ಪಡಿಸಿ, ತನಿಖೆ ಮುಂದುವರೆಸಬಹುದು.