ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಭಂದಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ (narendra modi) ಮಾತನಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಇಂಥ ಕಿಡಿ ಕೇಡಿ ಕೃತ್ಯ ನಡೆದಿದ್ದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.
ಈ ರೀತಿಯ ಹೀನ ಕೃತ್ಯವೆಸಗುವ ಜನರಿಗೆ ಅತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗುಡುಗಿದ ಮೋದಿ, ಬೇಕಂತಲೇ ಚುನಾವಣೆಯ ಸಂದರ್ಭದಲ್ಲಿ ಇಂಥ ವಿಡಿಯೋಗಳನ್ನ ಹರಿಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ಒಕ್ಕಲಿಗ ಪ್ರಾಭಲ್ಯವಿರುವ ಕ್ಷೇತ್ರಗಳಲ್ಲಿ ಮತದಾನ ಮುಗಿಯುವವರೆಗೂ ಕಾದು, ನಂತರದಲ್ಲಿ ರಾಜಕೀಯ ಲಾಭ ಪಡೆಯಲು (Political view) , ನೀಚರು ಇಂಥ ಹೀನ ಕೃತ್ಯವೆಸಗಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ಪಾಳಯದ ವಿರುದ್ಧ ಗುಡುಗಿದ್ದರೆ.