
ಲೈಂಗಿಕ ದೌರ್ಜನ್ಯ 2ನೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 2ನೇ ಲೈಂಗಿಕ ಪ್ರಕರಣದ ಜಾಮೀನು ಅರ್ಜಿಯನ್ನ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.ಇದೀಗ ಅರ್ಜಿ ವಜಾಗೊಂಡಿದ್ದು ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಿದೆ.