ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಜೆಡಿಎಸ್‌ನ ಹಲವು ಶಾಸಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಈ ಸಂಬಂಧ ಶಾಸಕರಾದ ಸಮೃದ್ಧಿ ಮಂಜುನಾಥ್ ಹಾಗೂ ಶರಣಗೌಡ ಕುಂದಕೂರ ಅವರು ಎಚ್.ಡಿ. ದೇವೇಗೌಡರಿಗೆ ಬಹಿರಂಗ ಪತ್ರ ಬರೆದು ಕೋರಿದ್ದರು.