ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ಕೇಸ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ನಾಯಕರ ನಡುವೆ ಇದೇ ವಿಚಾರ ಸಿಕ್ಕಾಪಟ್ಟೆ ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇದೇ ವಿಚಾರ ಮತ್ತಷ್ಟು ರೋಚಕತೆ ಸೃಷ್ಟಿಸೋ ಸಾಧ್ಯತೆ ಇದೆ.ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ವಿಚಾರಣೆ ಹಾಜರಾಗ ಹಿನ್ನೆಲೆಯಲ್ಲಿ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ ಎನ್ನಲಾಗಿದೆ.ಪ್ರಜ್ವಲ್ ಎಲ್ಲೇ ಕಂಡರೂ ವಶಕ್ಕೆ ಪಡೆಯಲು ಸೂಚನೆ ನೀಡಿದೆ. ಪ್ರಪಂಚದ ಎಲ್ಲಾ ಏರ್ ಪೋರ್ಟ್ ಗಳಿಗೂ ನೋಟಿಸ್ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಎಸ್ ಐಟಿ ಇಂಟರ್ ಪೋಲ್ ನ ಸಹಾಯ ಕೇಳಿದ್ದು, ಮೇ 16 ರಂದು ಪ್ರಜ್ವಲ್ ರೇವಣ್ಣ ವಾಪಸ್ ಆಗಲಿದ್ದು ಈ ವೇಳೆ ವಶಕ್ಕೆ ಪಡೆಯಲು ಎಸ್ ಐಟಿ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...
Read moreDetails






