ಪೆನ್ ಡ್ರೈವ್ ಕೇಸ್ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗ್ತಿದೆ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ , ವಕೀಲ ದೇವರಾಜಗೌಡರನ್ನು ಮತ್ತೆ ಎರಡು ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡರನ್ನು ಒಂದು ದಿನ ಎಸ್ ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ದೇವರಾಜೆಗೌಡರನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.ಪೆನ್ ಡ್ರೈವ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ 8ನೇ ಆರೋಪಿಯಾಗಿದ್ದು, ಮೇ 20ರ ಸಂಜೆ 5 ಗಂಟೆಗೆ ಮತ್ತೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ
ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್!
ಲಿಂಗಾಯತ ಪಂಚಮಸಾಲಿ (Lingayat panchamasali) ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬ ಕೂಗು ಹೆಚ್ಚಾಗಿದ್ದು ರಾಜ್ಯದಲ್ಲಿ 2A ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಬಗ್ಗೆ ಮೈಸೂರಿನಲ್ಲಿ...
Read moreDetails