
ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ (prajwalrevanna)ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು(women commission) ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ(SIT) ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್ (parsmeshwar) ಹೇಳಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.