ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರಶಾಂತ್ ರಾಜ್ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.
ತಮಿಳಿನ ಹಾಸ್ಯ ನಟ ಕಂ ನಾಯಕ ನಟ ಸಂತಾನಂ ಜೊತೆಗೂಡಿ ಚಿತ್ರ ಮಾಡುತ್ತಿರುವುದು ಹಳೆಯ ವಿಚಾರ. ಇದೀಗ ಚಿತ್ರತಂಡದಿಂದ ಹೊಸ ಅಪ್ಡೇಟ್ ಒಂದು ಹೊರ ಬಿದಿದ್ದು ಫರ್ಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡ ವಿನೂತನ ಮೆರೆದಿದೆ.
ಗಣೇಶ್ ಚತುರ್ಥಿಗೆ ಸಿನಿಮಾದ ಟೈಟಲ್ ಜೊತೆಗೆ ಫಸ್ಟ್ ಲುಕ್ ಕೂಡ ಅನಾವರಣಗೊಂಡಿದೆ. ವಿಭಿನ್ನವಾಗಿ ಮೂಡಿಬಂದಿರುವ ಪೋಸ್ಟರ್ ನಲ್ಲಿ ಸಂತಾನಂಗೆ ಎಂಟು ಕೈಗಳಿದ್ದು, ಒಂದೊಂದು ಕೈಯಲ್ಲಿ ಒಂದೊಂದು ವಸ್ತುಗಳನ್ನು ಹಿಡಿದುಕೊಂಡಿದ್ದಾರೆ. ಇಂಪ್ರೆಸಿವ್ ಆಗಿ ಮೂಡಿಬಂದಿರುವ ಪೋಸ್ಟರ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ರೋಮ್ಯಾಂಟಿಕ್ ಕಂ ಕಾಮಿಡಿ ಕಥಾಹಂದರ ಹೊಂದಿರುವ ಕಿಕ್ ಸಿನಿಮಾದಲ್ಲಿ ಸಂತಾನಂಗೆ ಜೋಡಿಯಾಗಿ ಬಸಣ್ಣಿ ಖ್ಯಾತಿಯ ತಾನ್ಯಾ ಹೋಪ್ ನಟಿಸಿದ್ದಾರೆ. ಉಳಿದಂತೆ ರಾಗಿಣಿ, ಸುಧು ಕೋಕಿಲಾ ಸೇರಿದಂತೆ ಹಲವರು ಚಿತ್ರದಲ್ಲಿದ್ದಾರೆ.
ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಶೀಘ್ರವೇ ಚಿತ್ರವನ್ನ ಬಿಡುಗಡೆ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ.