• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿ ಪ್ರತಾಪ್ ಸಿಂಹಗೆ ನೆಟ್ಟಿಗರ ಕ್ಲಾಸ್!

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಎಕ್ಸ್‌, ಫೇಸ್‌ಬುಕ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರಿಗೆ ನೆಟ್ಟಿಗರು ಪಾಠ ಮಾಡಿದ್ದಾರೆ.

ADVERTISEMENT

“ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ” ಎಂದು ಪ್ರತಾಪ್ ಸಿಂಹ ಎಕ್ಸ್‌ನಲ್ಲಿ ಪೊಸ್ಟ್ ಮಾಡಿದ್ದಾರೆ.ಈ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನಿಮ್ಮ ಸ್ನೇಹಿತನೇ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಹೈಕೋರ್ಟ್ ಏಕಸದಸ್ಯ ಪೀಠವು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿದೆ. ನಿನ್ನೆ ಪ್ರತಾಪ್ ಸಿಂಹ ಕೊಲೆ‌ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.“ಸಮಾಜದಲ್ಲಿ ಅಶಾಂತಿ ಹುಟ್ಟಿಸುವವರು. ಸಮಾಜದ ಸಾಮರಸ್ಯವನ್ನು ಹಾಳು ಮಾಡುವವರು.

ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ. pic.twitter.com/l8lsZBP43M

— Prathap Simha (@mepratap) August 12, 2024

ತತ್ವ ವಿಚಾರಗಳನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿರುವಂತವರನ್ನು ತಾವು ಹೋಗಿ ಭೇಟಿಯಾಗೋದು ಎಷ್ಟರ ಮಟ್ಟಿಗೆ ನ್ಯಾಯ ಮತ್ತು ನಿಮ್ಮ ಮನಸಾಕ್ಷಿ ಒಪ್ಪುತ್ತಾ” ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.“ಹಿಂದುತ್ವ ಎಂದರೆ ಕೊಲೆಗಾರರ ಜೊತೆ ಇರುವುದೇ..? ಇಂತಹ ಕೊಲೆಗಡುಕರೆಲ್ಲ ನಿಮ್ಮ ಸ್ನೇಹಿತರು” ಎಂದು ಮತ್ತೋರ್ವ ನೆಟ್ಟಿಗರು ಟೀಕಿಸಿದ್ದಾರೆ.

“ಒಬ್ಬ ದಿಟ್ಟ ಲಿಂಗಾಯತ ಪ್ರತಿಭಾವಂತೆ, ಸಾಮಾಜಿಕ ಕಾರ್ಯಕರ್ತೆ, ಜನಪರ ಪತ್ರಕರ್ತೆಯ ಕೊಲೆ ಪ್ರಕರಣದ ಆರೋಪಿಯನ್ನು ಮೆರೆಸೋದು ಯಾರನ್ನು ಮೆಚ್ಚಿಸೋಕೆ ಪ್ರತಾಪ್ ಸರ್..? ಆರ್‌ಎಸ್‌ಎಸ್‌ ನಾಯಕರನ್ನು ಮೆಚ್ಚಿಸಬೇಕು ಅಂದರೆ ಬಸವಣ್ಣನ ಲಿಂಗಾಯತವನ್ನು ದ್ವೇಷಿಸಲೇಬೇಕು ಅಲ್ವಾ..? ನಿಮ್ಮ ಈ ನಡೆ ಇತ್ತೀಚಿನ ನಿಮ್ಮ ಲಿಂಗಾಯತ ವಿರೋಧಿ ಹೇಳಿಕೆಗಳಿಗೆ ತಾಳೆಯಾಗುವಂತಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬರ್ತಾ ಬರ್ತಾ ರಾಯರ ಕುದುರೆ ಕತ್ತೆ ಆಯಿತು ಅಂದ ಹಾಗೆ, ಯಾಕೆ ಈ ಒಕ್ಕಲಿಗ ಲಿಂಗಾಯತರ ಮೋಸದ ಆಟ? ಈಗ ಕೊಲೆ ಆರೋಪಿಗಳ ಜೊತೆ .. ನಾವು ನಿಮ್ಮನ್ನ ಜಾತಿ ಮೀರಿ ಜನನಾಯಕ ಅಂದುಕೊಂಡಿದ್ದೆವು. ಜಾಗ್ರತೆಯಿಂದ ಹೆಜ್ಜೆ ಇಡೀ … ನಿಮ್ಮ ಜೊತೆ ನಾವಿದ್ದೇವೆ” ಎಂದು ಪ್ರತಾಪ್ ಬೆಂಬಲಿಗರೊಬ್ಬರು ಎಚ್ಚರಿಕೆ ನೀಡಿದ್ದಾರೆ.

Tags: BJPPratap SinghSlider
Previous Post

ತಂದೆಗೆ ಏಕವಚನದಲ್ಲೇ ನಿಂದಿಸಿದ್ದ ಡಿಸಿಎಂ ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ..

Next Post

ಆಲಂ ಪಾಷ ಅರ್ಜಿ ವಜಾಗೊಳಿಸಿದ ಕೋರ್ಟ್ ! ಸಿಎಂ ಸಿದ್ದುಗೆ ಹೆಚ್ಚಾದ ಟೆನ್ಷನ್ ! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಆಲಂ ಪಾಷ ಅರ್ಜಿ ವಜಾಗೊಳಿಸಿದ ಕೋರ್ಟ್ ! ಸಿಎಂ ಸಿದ್ದುಗೆ ಹೆಚ್ಚಾದ ಟೆನ್ಷನ್ ! 

ಆಲಂ ಪಾಷ ಅರ್ಜಿ ವಜಾಗೊಳಿಸಿದ ಕೋರ್ಟ್ ! ಸಿಎಂ ಸಿದ್ದುಗೆ ಹೆಚ್ಚಾದ ಟೆನ್ಷನ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada