
ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಎಕ್ಸ್, ಫೇಸ್‌ಬುಕ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರಿಗೆ ನೆಟ್ಟಿಗರು ಪಾಠ ಮಾಡಿದ್ದಾರೆ.

“ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ” ಎಂದು ಪ್ರತಾಪ್ ಸಿಂಹ ಎಕ್ಸ್‌ನಲ್ಲಿ ಪೊಸ್ಟ್ ಮಾಡಿದ್ದಾರೆ.ಈ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನಿಮ್ಮ ಸ್ನೇಹಿತನೇ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಹೈಕೋರ್ಟ್ ಏಕಸದಸ್ಯ ಪೀಠವು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿದೆ. ನಿನ್ನೆ ಪ್ರತಾಪ್ ಸಿಂಹ ಕೊಲೆ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.“ಸಮಾಜದಲ್ಲಿ ಅಶಾಂತಿ ಹುಟ್ಟಿಸುವವರು. ಸಮಾಜದ ಸಾಮರಸ್ಯವನ್ನು ಹಾಳು ಮಾಡುವವರು.
ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ. pic.twitter.com/l8lsZBP43M
— Prathap Simha (@mepratap) August 12, 2024
ತತ್ವ ವಿಚಾರಗಳನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿರುವಂತವರನ್ನು ತಾವು ಹೋಗಿ ಭೇಟಿಯಾಗೋದು ಎಷ್ಟರ ಮಟ್ಟಿಗೆ ನ್ಯಾಯ ಮತ್ತು ನಿಮ್ಮ ಮನಸಾಕ್ಷಿ ಒಪ್ಪುತ್ತಾ” ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.“ಹಿಂದುತ್ವ ಎಂದರೆ ಕೊಲೆಗಾರರ ಜೊತೆ ಇರುವುದೇ..? ಇಂತಹ ಕೊಲೆಗಡುಕರೆಲ್ಲ ನಿಮ್ಮ ಸ್ನೇಹಿತರು” ಎಂದು ಮತ್ತೋರ್ವ ನೆಟ್ಟಿಗರು ಟೀಕಿಸಿದ್ದಾರೆ.
“ಒಬ್ಬ ದಿಟ್ಟ ಲಿಂಗಾಯತ ಪ್ರತಿಭಾವಂತೆ, ಸಾಮಾಜಿಕ ಕಾರ್ಯಕರ್ತೆ, ಜನಪರ ಪತ್ರಕರ್ತೆಯ ಕೊಲೆ ಪ್ರಕರಣದ ಆರೋಪಿಯನ್ನು ಮೆರೆಸೋದು ಯಾರನ್ನು ಮೆಚ್ಚಿಸೋಕೆ ಪ್ರತಾಪ್ ಸರ್..? ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸಬೇಕು ಅಂದರೆ ಬಸವಣ್ಣನ ಲಿಂಗಾಯತವನ್ನು ದ್ವೇಷಿಸಲೇಬೇಕು ಅಲ್ವಾ..? ನಿಮ್ಮ ಈ ನಡೆ ಇತ್ತೀಚಿನ ನಿಮ್ಮ ಲಿಂಗಾಯತ ವಿರೋಧಿ ಹೇಳಿಕೆಗಳಿಗೆ ತಾಳೆಯಾಗುವಂತಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಬರ್ತಾ ಬರ್ತಾ ರಾಯರ ಕುದುರೆ ಕತ್ತೆ ಆಯಿತು ಅಂದ ಹಾಗೆ, ಯಾಕೆ ಈ ಒಕ್ಕಲಿಗ ಲಿಂಗಾಯತರ ಮೋಸದ ಆಟ? ಈಗ ಕೊಲೆ ಆರೋಪಿಗಳ ಜೊತೆ .. ನಾವು ನಿಮ್ಮನ್ನ ಜಾತಿ ಮೀರಿ ಜನನಾಯಕ ಅಂದುಕೊಂಡಿದ್ದೆವು. ಜಾಗ್ರತೆಯಿಂದ ಹೆಜ್ಜೆ ಇಡೀ … ನಿಮ್ಮ ಜೊತೆ ನಾವಿದ್ದೇವೆ” ಎಂದು ಪ್ರತಾಪ್ ಬೆಂಬಲಿಗರೊಬ್ಬರು ಎಚ್ಚರಿಕೆ ನೀಡಿದ್ದಾರೆ.