ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿಎಂ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ. ಪೊಲೀಸ್ ಅಧಿಕಾರಿ ಪ್ರವೀಣ್ ಸೂದ್ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಇನ್ನು ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ದರೆ ಪ್ರಕರಣವನ್ನ ಎನ್ಐಎಗೆ ಒಪ್ಪಿಸಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.