
ಹಾಸನ ವಿಡಿಯೋ ಕೇಸ್ ತನಿಖೆಯನ್ನ SIT ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.ವಿವಿಧ ಆಯಾಮಗಲ್ಲಿ ಇನ್ವೆಸ್ಟಿಗೇಷನ್ ಭರದಿಂದ ಸಾಗಿದೆ. ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಇಬ್ಬರೂ ಮಾಜಿ ಶಾಸಕ, ಹಾಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ ಅತ್ಯಾಪ್ತರು ಎನ್ನಲಾಗಿದೆ.ಶನಿವಾರ ಮಧ್ಯರಾತ್ರಿಯೇ ಚೇತನ್ ಹಾಗೂ ಲಿಖಿತ್‌ರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರೀತಂಗೌಡ ಕಚೇರಿಯ ಸಿಬ್ಬಂದಿ ಹಾಗೂ ಪ್ರೀತಂಗೌಡ ಆಪ್ತನನ್ನು ವಶಕ್ಕೆ ಪಡೆಯಲಾಗಿದೆ.

ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಬಿಜೆಪಿಗೆ ಚೆಕ್‌ಮೇಟ್ ಮಾಡಲಾಗಿದೆ.ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ನಾಯಕರಿಗೆ ಈ ಮೂಲಕ ಚೆಕ್‌ಮೇಟ್ ಕೊಡಲು ಮುಂದಾಗಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಲಿಖಿತ್ ಪ್ರೀತಂಗೌಡ ಅವರ ಜತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದರು.











