ರಾಯಚೂರು (Raichur) ಜಿಲ್ಲೆಯಲ್ಲಿ ಮತ್ತೊಬ್ಬ ಬಾಣಂತಿಯ ಸಾಬಣ್ಣಪ್ಪಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ (24) ಸಾವನ್ನಪ್ಪಿದ್ದಾರೆ.

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ (RIMS) ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವನಪ್ಪಿದ್ದು,ಜನವರಿ 2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಜೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ರಂದು ಸಾವು ಸಂಭವಿಸಿದೆ ಎನ್ನಲಾಗಿದೆ.
RIMS ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಬಾಣಂತಿ ಸಾವನ್ನಪ್ಪಿದ್ದು, ವೆಂಟಿಲೇಟರ್ ನಲ್ಲಿ ಶಿಶುವಿಗೆ ಚಿಕಿತ್ಸೆ ಮಜಂದುವರೆಸಲಾಗಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬ ಕಂಗಾಲಾಗಿದೆ.