
ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ತಯಾರಿಗಳು ಶುರುವಾಗಿವೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಸ್ಪೀಕರ್ ಯು. ಟಿ. ಖಾದರ್, ಅಧಿಕೃತವಾಗಿ ದಿನಾಂಕವನ್ನು ಸರ್ಕಾರ ಪ್ರಕಟ ಮಾಡಲಿದೆ. ಸಿದ್ದತೆ ಮಾಡಲು ಅಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಪ್ರಮುಖವಾಗಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಚರ್ಚೆಗೆ ಸಮಯ ಮೀಸಲಿಡುತ್ತೇವೆ. ಕಳೆದ ಬಾರಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆಗೆ ನಾಲ್ಕು ದಿನಗಳ ಕಾಲ ಅವಕಾಶ ನೀಡಲಾಗಿತ್ತು ಎಂದಿದ್ದಾರೆ. ಇನ್ನು ಅಧಿವೇಶನ ನೋಡಲು ಎಲ್ಲಾ ವರ್ಗದ ಜನರಿಗೆ ಅವಕಾಶ ನೀಡಲಾಗುವುದು ಅಂತಾನೂ ತಿಳಿಸಿದ್ದಾರೆ.

ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರ ವರೆಗೆ ನಡೆಯಬಹುದು.ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗಿದೆ.ಕಳೆದ ವರ್ಷ ಎದುರಾಗಿದ್ದ ಸಣ್ಣಪುಟ್ಟ ಸಮಸ್ಯೆ ಇತ್ಯರ್ಥ ಪಡಿಸುತ್ತೇವೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ಆಗಿದೆ. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರಸ್ತಾಪವನೆ ಸಲ್ಲಿಕೆ ಮಾಡಲಾಗುತ್ತದೆ. ನಾನು ಹಾಗು ಸ್ಪೀಕರ್ ಯು.ಟಿ ಖಾದರ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶಾಸಕರ ಭವನಕ್ಕೆ ಒತ್ತಡ ಮಾಡ್ತಿವಿ ಎಂದಿದ್ದಾರೆ.