• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೂರನೆ ಅಲೆ ಎದುರಿಸಲು‌ ಕೇರಳ ತಯಾರು: ಕೋವಿಡ್ ಆಸ್ಪತ್ರೆಯಾಗಿ ಬದಲಾದ ಕೋಲಾ ಕಾರ್ಖಾನೆ

Any Mind by Any Mind
June 18, 2021
in ದೇಶ
0
ಮೂರನೆ ಅಲೆ ಎದುರಿಸಲು‌ ಕೇರಳ ತಯಾರು: ಕೋವಿಡ್ ಆಸ್ಪತ್ರೆಯಾಗಿ ಬದಲಾದ ಕೋಲಾ ಕಾರ್ಖಾನೆ
Share on WhatsAppShare on FacebookShare on Telegram

ಸಾಂಕ್ರಾಮಿಕ ರೋಗದ ಮೂರನೆ ಅಲೆಯ ಕುರಿತು ಆತಂಕದೊಂದಿಗೆ ಕರೋನಾ ಎರಡನೇ ಅಲೆಯಿಂದ ಭಾರತ ನಿಧಾನಕ್ಕೆ ಚೇತರಿಸುತ್ತಿದೆ. ಅನೇಕ ರಾಜ್ಯಗಳು ಸಂಭಾವ್ಯ ಮೂರನೆ ಅಲೆಯಿಂದ ತಪ್ಪಿಸಿಕೊಳ್ಳಲು, ಅಪಾಯದ ಪ್ರಮಾಣವನ್ನು ತಗ್ಗಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ.

ADVERTISEMENT

ಮೊದಲನೆ ಹಾಗೂ ಎರಡನೇ ಅಲೆಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸದ ಕಾರಣ ತತ್ತರಿಸಿದ ಸರ್ಕಾರ, ಮತ್ತೊಮ್ಮೆ ಇದೇ ತಪ್ಪು ಮಾಡದಿರುವುದು ಬುದ್ದಿವಂತಿಕೆ. ಕೇರಳ ಸರ್ಕಾರ ಅಂತಹ ಮುನ್ನೆಚ್ಚರಿಕೆಯನ್ನು ವಹಿಸುತ್ತಿರುವುದು ಶ್ಲಾಘನೀಯ.

ಭಾರತದಲ್ಲಿ ಮೊದಲ ಕರೋನಾ ಪ್ರಕರಣ ಕಾಣಿಸಿಕೊಂಡ ಕೇರಳ, ಇದೀಗ ಮೂರನೆ ಅಲೆ ಎದುರಿಸಲು ತನ್ನನ್ನು ತಾನು ಸನ್ನದ್ದುಗೊಳಿಸುತ್ತಿದೆ. ಮುಚ್ಚಲ್ಪಟ್ಟಿದ್ದ ಕಾರ್ಖಾನೆಯೊಂದನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಮಾರ್ಪಡಿಸಿದೆ.

ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಾಲಕ್ಕಾಡ್‌ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದೆ ಇರುವ ಕೊಕಾ-ಕೊಲಾ ಘಟಕವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಮಾರ್ಪಾಡುಗೊಳಿಸಲಾಗಿದೆ ಎಂದಿದ್ದಾರೆ.

Turned a non-functioning Coca Cola plant in Palakkad into a 550 bed Covid treatment center spending ₹1.1 Crore. The CSLTC has 100 oxygen beds, 50 ICU beds and 20 ventilators. Kerala is gearing up for the impending third wave. pic.twitter.com/jyDGwr2lZT

— Pinarayi Vijayan (@pinarayivijayan) June 18, 2021

1.1 ಕೋಟಿ ರುಪಾಯಿ ವೆಚ್ಚದಲ್ಲಿ ತಯಾರಿಸಿದ ಈ ಘಟಕದಲ್ಲಿ 550 ಹಾಸಿಗೆಗಳನ್ನು ಹಾಕಲಾಗಿದ್ದು, ಅದರಲ್ಲಿ 100 ಆಕ್ಸಿಜನ್‌ ಸಹಿತ ಹಾಸಿಗೆಗಳಿರುತ್ತವೆ. 50 ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ ವ್ಯವಸ್ಥೆಯ 20 ಬೆಡ್‌ಗಳನ್ನು ನಿರ್ಮಿಸಲಾಗಿದೆ. ಕೇರಳವು ಮೂರನೇ ಅಲೆ ಎದುರಿಸಲು ಸನ್ನದ್ದವಾಗಿದೆ ಎಂದು ವಿಜಯನ್‌ ತಿಳಿಸಿದ್ದಾರೆ.

2000ದ ಆರಂಭದ ಹೊತ್ತಿನಲ್ಲಿ ಈ ಕೊಕ-ಕೊಲಾ ಘಟಕವನ್ನು ಸ್ಥಳೀಯ ನಾಗರಿಕರು ಪ್ರತಿಭಟನೆ ನಡೆಸಿ ಮುಚ್ಚುವಂತೆ ಮಾಡಿದ್ದರು. ಇಲ್ಲಿ ಘಟಕ ಆರಂಭಿಸಿದಂದಿನಿಂದ, ಸ್ಥಳೀಯ ಪ್ರದೇಶದ ಬಾವಿ ನೀರುಗಳೆಲ್ಲಾ ಒಣಗಿ ಹೋಗಿದ್ದು, ನೀರು ವಿಷಕಾರಿಯಾಗಿದೆಯೆಂದು ಆರೋಪಿಸಿ ಬೃಹತ್‌ ಪ್ರತಿಭಟನೆಗಳ ಸರಣಿಯನ್ನು ನಡೆಸಲಾಗಿತ್ತು. ಪ್ರತಿಭಟನೆಯ ತೀವ್ರತೆಗೆ ಘಟಕವನ್ನು ಸ್ಥಗಿತಗೊಳಿಸಲಾಗಿತ್ತು.

ತೀವ್ರ ಒತ್ತಡದ ನಡುವೆ ಸ್ಥಳೀಯ ಪಂಚಾಯತ್ ಸ್ಥಾವರ ಪರವಾನಗಿಯನ್ನು ಹಿಂತೆಗೆದುಕೊಂಡಿತು. ಇದರ ವಿರುದ್ಧದ ಸುದೀರ್ಘ ಕಾನೂನು ಹೋರಾಟದ ನಂತರ, 2018 ರಲ್ಲಿ ಕಂಪನಿಯು ಅಧಿಕೃತವಾಗಿ ಕಾರ್ಖಾನೆಯನ್ನು ಮುಚ್ಚುವುದಾಗಿ ಘೋಷಿಸಿತ್ತು.

Tags: ‌ covid-19‌ covid-19 test3rd WaveCoca Colacovid-19 testKeralaKerala Government
Previous Post

ಪ್ರತಿರೋಧದ ದನಿಗಳಿಗೆ ನ್ಯಾಯಾಂಗದ ಆಕ್ಸಿಜನ್

Next Post

ಕರೋನ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರೋದಿಲ್ಲ: WHO & AIMS ಸಂಶೋಧನೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಕೋವಿಡ್ ಮೂರನೆಯ ಅಲೆಯಿಂದ ಮಕ್ಕಳಿಗೆ ಅಪಾಯ ಎಂಬುದಕ್ಕೆ ಪುರಾವೆಗಳಿಲ್ಲ: ಲ್ಯಾನ್ಸೆಟ್ ವರದಿ

ಕರೋನ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರೋದಿಲ್ಲ: WHO & AIMS ಸಂಶೋಧನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada