
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್ ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬ್ಯಾಡ್ಮಿಂಟನ್ ಆಟವನ್ನು ಆಡಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ರಾಕೆಟ್ ಕ್ರೀಡೆಯಲ್ಲಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿದರು, ಸೈನಾ ಅವರಿಂದ ಪ್ರಶಂಸೆ ಗಳಿಸಿದರು.
Madam President playing badminton with Saina Nehwal.. what a beautiful video.. ♥️ pic.twitter.com/315QNPW0cI
— Mr Sinha (@MrSinha_) July 10, 2024
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಕೋರ್ ಗಳಿಸುತ್ತಿದ್ದಂತೆ ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟಿ ಅವರನ್ನು ಹುರಿದುಂಬಿಸಿದರು.











