ನವದೆಹಲಿ :ಏ.೦೮: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಯುದ್ಧ ವಿಮಾನದಲ್ಲಿ ಈ ರೀತಿ ಹಾರಾಟ ನಡೆಸಿದ ಭಾರತದ ಎರಡನೇ ರಾಷ್ಟ್ರಪತಿ ಎಂಬ ಹಿರಿಮಗೆ ಇವರು ಪಾತ್ರರಾಗಿದ್ದಾರೆ.
ಮುರ್ಮು ಅವರು ಏಪ್ರಿಲ್ 6ರಿಂದ 8ರವರೆಗೆ ಮೂರು ದಿನಗಳ ಅಸ್ಸಾಂಗೆ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಇಂದು ಅವರು ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ಗೆ ಭೇಟಿ ನೀಡಿದ್ದಾರೆ.
ಈ ರೀತಿ ಯುದ್ಧ ವಿಮಾನದಲ್ಲಿ ಈಗಾಗಲೇ ಮಹಿಳಾ ರಾಷ್ಟ್ರಪತಿಯೊಬ್ಬರು ಈ ಹಿಂದೆ ಮಾಡಿದ್ದಾರೆ. ಇಲ್ಲದಿದ್ದರೆ ಇದೀಗ ದ್ರೌಪದಿ ಮುರ್ಮು ಇಂತಹ ಸಾಧನೆ ಮಾಡಿದ ಮೊದಲ ರಾಷ್ಟ್ರಪತಿ ಎಂಬ ಹಿರಿಮೆಗೆ ಪಾತ್ರರಾಗುತ್ತಿದ್ದರು. ಪುಣೆಯ ವಾಯುಪಡೆಯ ವಾಯುನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು 2009ರಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
ಭಾರತದ ರಾಷ್ಟ್ರಪತಿಗಳಾಗಿದ್ದ ಕಾಲದಲ್ಲಿ ಎಪಿಜೆ ಅಬ್ದುಲ್ ಕಲಾಂ ಮತ್ತು ರಾಮನಾಥ್ ಕೋವಿಂದ್ ಅವರು ಕೂಡ ಸುಖೋಯ್ 30 ಫೈಟರ್ ಏರ್‌ಕ್ರಾಫ್ಟ್‌ಗಳಲ್ಲಿ ಹಾರಾಟ ನಡೆಸಿದ್ದರು. ಇವರು ಪುಣೆಯ ಐಎಎಫ್ ವಾಯುನೆಲೆಯಿಂದ ಹಾರಾಟ ನಡೆಸಿದ್ದರು.