ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಗುರುವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ, ಜೂನ್ 18ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.
ಜೂನ್ 29ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಜುಲೈ 24ಕ್ಕೆ ರಾಷ್ಟ್ರಪತಿ ರಾಮನಾಥನ್ ಕೋವಿಂದ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.