ಇದೀಗ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮಣಿಪುರದ ಮಾಜಿ ಸಿಎಂ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ದಿನಗಳ ನಂತರ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ನಾಯಕತ್ವವು ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ನಾಯಕನನ್ನು ಹೆಸರಿಸಲು ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಗೃಹ ಸಚಿವಾಲಯವು (MHA) ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸುವ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.