• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಅವರಿಂದ ಕರ್ನಾಟಕದ ಬೇಡಿಕೆಗಳ ಬಗ್ಗೆ ಪರಿಶೀಲನೆ ಭರವಸೆ: ಡಿಸಿಎಂ ಡಿ‌.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in ರಾಜಕೀಯ, ವಾಣಿಜ್ಯ
0
ಪ್ರಧಾನಿ ಅವರಿಂದ ಕರ್ನಾಟಕದ ಬೇಡಿಕೆಗಳ ಬಗ್ಗೆ ಪರಿಶೀಲನೆ ಭರವಸೆ: ಡಿಸಿಎಂ ಡಿ‌.ಕೆ.ಶಿವಕುಮಾರ್
Share on WhatsAppShare on FacebookShare on Telegram

“ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು” ಎಂದರು.

“ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು” ಎಂದು ಹೇಳಿದರು.

ಗಿಫ್ಟ್ ಸಿಟಿಗಾಗಿ ಮನವಿ

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ” ಎಂದರು.

ಬೆಂಗಳೂರಿನ ಅಭಿವೃದ್ಧಿಗಾಗಿ ಮನವಿ

ಬೆಂಗಳೂರಿನ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಲಾಯಿತೇ ಎಂದು ಕೇಳಿದಾಗ “ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ‌. ಮಂತ್ರಿಗಳು ಹಾಗೂ
ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ” ಎಂದರು.

ಜುಲೈ 3 ರ ನಂತರ ರಾಹುಲ್ ಗಾಂಧಿ ಅವರ ಭೇಟಿ

ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ಕೇಳಿದಾಗ “ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ” ಎಂದು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಳಿ ಹಾಗೂ ಸ್ವಚ್ಛವಾದ ಹಲ್ಲುಗಳು ನಿಮ್ಮದಾಗಬೇಕು ಅಂದ್ರೆ ಹೀಗೆ ಮಾಡಿ.!

Next Post

ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬಿಜೆಪಿ ಬ್ಯಾಡ್ ಟ್ವೀಟ್ – ಸಚಿವ ದಿನೇಶ್ ಗುಂಡೂರಾವ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
ವಾಣಿಜ್ಯ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

by ಪ್ರತಿಧ್ವನಿ
April 10, 2026
0

ಡಿಜಿಟಲ್ ಪಾವತಿಗಳನ್ನು ಹೆಚ್ಚಾಗಿ ಬಳಸುವ ಜನರಿಗೆ ಮಹತ್ವದ ಬದಲಾವಣೆಯ ಸೂಚನೆ ದೊರೆತಿದೆ. ಆನ್‌ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ನಿಯಮವನ್ನು ಪರಿಗಣಿಸುತ್ತಿದ್ದು,...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬಿಜೆಪಿ ಬ್ಯಾಡ್ ಟ್ವೀಟ್ – ಸಚಿವ ದಿನೇಶ್ ಗುಂಡೂರಾವ್

ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬಿಜೆಪಿ ಬ್ಯಾಡ್ ಟ್ವೀಟ್ - ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada