ಕನಕದಾಸ ಜಯಮತಿ ನಿಮಿತ್ತ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ದೊರೆತ್ತಿದೆ.
ವಿಧಾನಸೌಧದಲ್ಲಿರುವ ಕನಕದಾಸರ ಪ್ರತಿಮೆ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದೆ ಪ್ರಧಾನಿ ನಂತರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಚೆನೈ-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಅಲ್ಲಿಂದ ಕೆಂಪೇಗೌಡ ವಿಮಾಣ ನಿಲ್ದಾಣಕ್ಕೆ ತೆರಳಿದ್ದ ಪ್ರಧಾನಿ ಮೋದಿ ಟರ್ಮಿನಲ್-2 ಉದ್ಘಾಟಿಸಿದ್ದಾರೆ ಮತ್ತು ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದಿದ್ದಾರೆ.
ಇನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ. ಪವಿತ್ರ ಜಲ ಹಾಗೂ ಮೃತ್ತಿಕೆಯನ್ನು ಕೆಂಪೇಗೌಡರಿಗೆ ಅರ್ಪಿಸುವ ಮೂಲಕ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.
ಇನ್ನು ಪ್ರತಿಮೆ ಅನಾವರಣ ಮಾಡಿ ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ ಬೆಂಗಳೂರು ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪಾತ್ರ ಅಪೂರ್ವವಾದದು ಬೆಂಗಲೂರಿನಲ್ಲಿ ಪ್ರಗತಿ ಪ್ರತಿಮೆಯನ್ನು ಅನಾವರಣ ಮಾಡಿದ್ದು ನನ್ನ ಹೆಮ್ಮೆ ಎಂದು ಹೇಳಿದ್ದಾರೆ.
ಇಡೀ ದೇಶವು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕರ್ನಾಟಕಕ್ಕೆ 4 ಲಕ್ಷ ಕೋಟಿ ರೂಪಾಯಿಯ ಬಂಡವಾಳ ಹೂಡಿಕೆಯಾಗಿದೆ ಇದು ಡಬಲ್ ಇಂಜಿನ್ ಸರ್ಕಾರದ ರಾಜ್ಯದಲ್ಲಿ ಎಲ್ಲಾ ರೀತಿಯ ಅಭಿವೃದ್ದಿಯಿಂದ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಉದ್ಘಾಟನೆಯಾಗಿರುವ ಟರ್ಮಿನಲ್-2 ಪೋಟೋಗಿಂತ ಹತ್ತಿರದಲ್ಲಿ ಹೆಚ್ಚು ಆಧುನಿಕವಾಗಿ ಕಾಣುತ್ತದೆ. ಭಾರತೀಯ ಸ್ಟಾರ್ಟಪ್ ವ್ಯವಸ್ಥೆಯಲ್ಲಿ ಬೆಂಗಳೂರು ಮಹತ್ವದ ಪಾತ್ರ ವಹಿಸಿದೆ ಎಂದು ಕೊಂಡಾಡಿದ್ದಾರೆ.