• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಪ್ರಧಾನಿ ಮೋದಿ ಜನ ಸಂಕಷ್ಟದಲ್ಲಿದ್ದಾಗ ಬರಲಿಲ್ಲ.. ಇವಾಗ ಬಂದು ರೋಡ್ ಶೋ ನಡೆಸಿ ಜನರತ್ತ ಕೈ ಬೀಸುತ್ತಿದ್ದಾರೆʼ: ಹೆಚ್‌.ಡಿ.ಕುಮಾರಸ್ವಾಮಿ

Any Mind by Any Mind
May 3, 2023
in ರಾಜಕೀಯ
0
ʻಪ್ರಧಾನಿ ಮೋದಿ ಜನ ಸಂಕಷ್ಟದಲ್ಲಿದ್ದಾಗ ಬರಲಿಲ್ಲ.. ಇವಾಗ ಬಂದು ರೋಡ್ ಶೋ ನಡೆಸಿ ಜನರತ್ತ ಕೈ ಬೀಸುತ್ತಿದ್ದಾರೆʼ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD kumaraswamy) ವಾಗ್ದಾಳಿ ನಡೆಸಿದ್ದಾರೆ. ʻರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷ್ಟಗಳಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಚುನಾವಣೆ(election) ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆʼ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ʻಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ. ಇವರು ರಾಜ್ಯದ ಜನ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಾಗಿತ್ತು. ಇವಾಗ ಬಂದು ಮೋದಿಯವರು ರೋಡ್ ಶೋ(road show) ಮೂಲಕ ಜನರತ್ತ ಕೈ ಬೀಸುತ್ತಿದ್ದಾರೆ. ರಾಜ್ಯಕ್ಕೆ ಇವರ ಕೊಡುಗೆ ಏನು?ʼ ಎಂದು ಖಾರವಾಗಿ ಹೆಚ್‌ಡಿಕೆ (HDK) ಪ್ರಶ್ನಿಸಿದ್ರು.  

ADVERTISEMENT

ʻಕಲ್ಯಾಣಕ ಕರ್ನಾಟಕಕ್ಕೆ ಬಿಜೆಪಿಯ(BJP) ಕೊಡುಗೆ ಏನು? ಕೃಷ್ಣಾ ನ್ಯಾಯಧಿಕರಣದ ತೀರ್ಪು ಬಂದು ಹತ್ತು ವರ್ಷ ಆಯಿತು‌. ಈ ಭಾಗಕ್ಕೆ, ಮುಖ್ಯವಾಗಿ ನೀರಾವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಏನು ಮಾಡಿವೆ? ಜೆಡಿಎಸ್,(JDS) ಕಾಂಗ್ರೆಸ್(congress) ರೈತರಿಗೆ ಅನ್ಯಾಯ ಮಾಡಿವೆ ಅಂತಾರೆ ಮೋದಿ ಅವರು. ಹಾಗಾದರೆ, ಅವರು ರೈತರಿಗೆ ಏನ್ ಮಾಡಿದ್ದಾರೆ ಎಂದು ಹೇಳಬೇಕಲ್ಲವೆ? ಅವರ ಫಸಲ್ ಭೀಮಾ ಯೋಜನೆಯ ಪ್ರೀಮಿಯಂ ಹಣವನ್ನೆ ಕೊಡಲಿಲ್ಲ. ಆ ಯೋಜನೆ ಮೋಸದ ಬಗ್ಗೆ ಇಡೀ ದೇಶದ ಉದ್ದಗಲಕ್ಕೂ ಚರ್ಚೆ ಆಗ್ತಿದೆ. ಇದಕ್ಕೆ ಮೋದಿ ಉತ್ತರ ಏನು?ʼ ಅಂತ ಕುಮಾರಸ್ವಾಮಿ(kumaraswamy) ಕೇಳಿದರು. ʻಇಷ್ಟು ದಿನ ಏನನ್ನೂ ಮಾಡದವರು ಈಗ ಬಂದು ನಲ್ಲಿಯಲ್ಲಿ ನೀರು ಕೊಡ್ತಿನಿ ಅಂತ ಮೋದಿ ಹೇಳ್ತಾ ಇದ್ದಾರೆ. ಯಾವ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ ಯಶಸ್ವಿಯಾಗಿದೆ? ಹಣ ಕೆಲವರ ಕಿಸಿಗೆ ಹರಿದಿದೆಯೇ ಹೊರತು ನೀರು ಹರಿದಿಲ್ಲ. ಇದರಲ್ಲಿ ಸಂಬಂಧ ಪಟ್ಟ ಮಂತ್ರಿಗಳು ಸಂಪದ್ಭರತರಾಗಿದ್ದಾರೆ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ʻಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ(congress manifesto) ಬಜರಂಗ ದಳವನ್ನು ನಿಷೇಧ ಮಾಡಲಾಗುವುದು ಎಂದು ಘೋಷಣೆ ಮಾಡಿದೆ. ಬ್ಯಾನ್ ಮಾಡಿದ್ರೆ ಸಮಸ್ಯೆಗೆ ಪರಿಹಾರ ಆಗುತ್ತಾ? ಎರಡೂ ಪಕ್ಷಗಳು ಈ ಬಗ್ಗೆ ಯೋಚನೆ ಮಾಡಬೇಕು ಅಂತ ಹೆಚ್‌ಡಿ ಕುಮಾರಸ್ವಾಮಿ(HD kumaraswamy) ಟಾಂಗ್‌ ಕೊಟ್ಟರು. ʻಬಜರಂಗದಳದಲ್ಲಿ ಅಮಯಾಕರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅವರ ಮನಸ್ಸು ಕೆಡಿಸಿ ಹಾಳು ಮಾಡಲಾಗುತ್ತಿದೆ. ಅವರ ತಲೆಯಲ್ಲಿ ಏನೆನೋ ತುಂಬಿ ಅವರನ್ನ ಹಾಳು ಮಾಡ್ತಿದ್ದಾರೆ. ಅಮಾಯಕರನ್ನು ಚಿತಾವಣೆ ಮಾಡೋರನ್ನು ಮೊದಲು ಮಟ್ಟಹಾಕಬೇಕು. ಅದು ಬಿಟ್ಟು ಬ್ಯಾನ್ ಮಾಡ್ತಿನಿ ಅಂದ್ರೆ ಉಪಯೋಗ ಏನು? ಕಾಂಗ್ರೆಸ್ ನವರು(congress) ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಇವರು ಯಾಕೆ‌ ಬ್ಯಾನ್ ಮಾಡಲಿಲ್ಲ ಅಂತ ಕಟುವಾಗಿ ಟೀಕಿಸಿದರು.

ʻಪ್ರಧಾನಿ ಮೋದಿಯವರು(pm narendra modi) ನಮ್ಮನ್ನು ಟೀಕೆ ಮಾಡ್ತಿದ್ದಾರೆ. ನಮಗೆ  ಸಿದ್ದಾಂತ ಇಲ್ಲ ಎನ್ನುತ್ತಿದ್ದಾರೆ. ನಾವು ಬಿಜೆಪಿ(BJP) ಜತೆ ಮೈತ್ರಿ ಮಾಡಿಕೊಂಡರೆ ಸಿದ್ದಾಂತ ಸರಿಯಾಗುತ್ತದಾ? ಕಾಂಗ್ರೆಸ್ ಜತೆ ಹೊದರೆ ಸೈದ್ದಾಂತಿಕತೆ ಸರಿ ಇರಲ್ವಾ? ಎಂದು ಪ್ರಧಾನಿಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ರು. ʻಕಲ್ಯಾಣ ಕರ್ನಾಟಕ(kalyana karnataka) ಭಾಗಕ್ಕೆ ಅತೀ ಹೆಚ್ಚು ಕೊಡುಗೆ ಕೊಟ್ಟವನು ನಾನು. ಸಾಲ ಮನ್ನಾ ಮಾಡಿ ರೈತರ ಜೀವ ಉಳಿಸಿದ್ದು ನಾನು. ಅದನ್ನು ಮೋದಿ ಮಾಡಿದ್ರಾ? ಮೋದಿಯವರ ವರ್ಚಸ್ಸು ಕಡಿಮೆಯಾಗಿದೆ. ಅವರ ಪ್ರಚಾರ ಈ ಸಲ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. 9 ವರ್ಷ ಆಯಿತಲ್ಲಾ, ಅವರ ವರ್ಚಸ್ಸು ಕೂಡ ಕಡಿಮೆಯಾಗಿದೆ ಅಂತ ಕುಮಾರಸ್ವಾಮಿ ಲೇವಡಿ ಮಾಡಿದ್ರು.  ಇದೇ ವೇಳೆ ಮಾತ್ನಾಡಿದ ಹೆಚ್‌ಡಿಕೆ,(HDK) ʻಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ನಮ್ಮ ಬಗ್ಗೆ ಮಾತನಾಡುತ್ತಲೇ ಇದ್ದರೆ. ನಾವು ಗೆದ್ದೆತ್ತಿನ ಬಾಲ ಹಿಡಿತಿವಿ ಅಂತಾರೆ. ಸಿದ್ದರಾಮಯ್ಯ ಯಾಕೆ ಸೋತೆತ್ತಿನ ಬಾಲ ಹಿಡಿದುಕೊಂಡು ಬರ್ತಾರೆ? ಅಂದು ಸಿದ್ದರಾಮಯ್ಯನವರನ್ನ ಪ್ರಶ್ನಿಸಿದ್ರು.

Tags: #bjp#campaign#congress#election2023#hdkumaraswamy#jds#karnataka#karnatakaassemblyelection#narendramodi#pratidhvani#pratidhvanidigital#pratidhvaninews#roadshow#statement
Previous Post

‘ಭಜರಂಗದಳ ಬ್ಯಾನ್​ ಮಾಡೋದು ಕಾಂಗ್ರೆಸ್​ ತಿರುಕನ ಕನಸು ’ : ಬಿಎಸ್​ವೈ ವ್ಯಂಗ್ಯ

Next Post

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada