ಕರೋನಾ ಮುಕ್ತ ಗ್ರಾಮಕ್ಕೆ ಸಂಕಲ್ಪ: ಲಸಿಕೆ ಅಭಿಯಾನ ಚುರುಕುಗೊಳಿಸಲು ಪ್ರಧಾನಿ ಮೋದಿ ನಿರ್ದೇಶನ

ಕೋವಿಡ್ ನಿಯಂತ್ರಣ ಸಂಬಂಧ ರಾಷ್ಟ್ರದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಯವರು, ಬೃಹತ್ ನಗರಗಳ ಆಯುಕ್ತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಸಂವಾದ ನಡೆಸಿದ್ದಾರೆ.

ಮುಖ್ಯಮಂತ್ರಿಯವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಮತ್ತು ಮಾರ್ಗದರ್ಶನ ಪಡೆದು ಕರೋನಾ ವೈರಸ್ ವಿರುದ್ಧ ಹೋರಾಡಲು ಪಣತೊಡಬೇಕು. ಆ ದಿಸೆಯಲ್ಲಿ ಪ್ರತಿ ಗ್ರಾಮವನ್ನು ಕರೋನಾ ಮುಕ್ತವನ್ನಾಗಿ ಮಾಡಲು ಶ್ರಮಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂಹವಾದಲ್ಲಿ ಹೇಳಿದ್ದಾರೆ.

ಕೋವಿಡ್ 19 ನಿಯಂತ್ರಣ ಸಂಬಂಧ ಪ್ರತಿ ಜಿಲ್ಲೆಗಳಲ್ಲಿಯೂ ಸವಾಲಿನಿಂದ ಎದುರಿಸಬೇಕು. ಕರೋನಾ ವೈರಸ್‍ನ್ನು ನಿಯಂತ್ರಿಸುವಲ್ಲಿ ಜಿಲ್ಲಾಧಿಕಾರಿ ಅವರು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಣಯ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ಕೊಟ್ಟಿದ್ದಾರೆ.

ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು. ಕಂಟೈನ್‍ಮೆಂಟ್ ವಲಯಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಚಾಚುತಪ್ಪದೆ ಪಾಲಿಸಬೇಕು. ಕೋವಿಡ್ 19 ನಿಯಂತ್ರಿಸಲು ಎಲ್ಲರೂ ಪಣತೊಡಬೇಕು. ಗ್ರಾಮಿಣ ಮತ್ತು ದುರ್ಗಮ ಪ್ರದೇಶದಲ್ಲಿ ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

 ಕೋವಿಡ್ ನಿಯಂತ್ರಣ ಸಂಬಂಧ ಕೆಲವು ಜಿಲ್ಲೆಗಳು ಸ್ಥಳೀಯವಾಗಿ ಕೈಗೊಂಡ ಕ್ರಮಗಳು ಶ್ಲಾಘನೀಯವಾಗಿವೆ. ತಮ್ಮ ಹೊಸ ವಿಚಾರಗಳಿಂದ ಕೋವಿಡ್ ಪ್ರಕರಣಗಳು ಕಡಮೆಯಾಗಿದ್ದಲ್ಲಿ ಸರ್ಕಾರ ಮತ್ತು ಇತರೆ ಜಿಲ್ಲೆಗಳಿಗೂ ನೀವು ಕೈಗೊಂಡ  ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕೋವಿಡ್ ನಿಯಂತ್ರಿಸಲು ಕೈ ಜೋಡಿಸುವಂತೆ  ಮೋದಿ ಕರೆನೀಡಿದ್ದಾರೆ.

ಕರೋನಾ ಮುಕ್ತ ಗ್ರಾಮಕ್ಕೆ ಸಂಕಲ್ಪಿಸುವುದರ ಜೊತೆಗೆ ಲಸಿಕಾ ಅಭಿಯಾನ ಚುರುಕುಗೊಳಿಸಲು ನಿರ್ದೇಶನ ನೀಡಿದರು. ಕೋವಿಡ್ ಕುರಿತು ಗ್ರಾಮಿಣ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಬೇಕು ಮತ್ತು ಈ ಕುರಿತು ಜಾಗೃತಿ ಮೂಡಿಸಬೇಕು ಎಂದಿದ್ದಾರೆ.  ಎರಡನೇ ಕೋವಿಡ್ 19 ಅಲೆಯನ್ನು ನಿಯಂತ್ರಣ ಮಾಡುವಲ್ಲಿ ಶ್ರಮಿಸಬೇಕು, ಕೋವಿಡ್ 19 ಆತಂಕವನ್ನು ಸಾರ್ವಜನಿಕರಲ್ಲಿ ಕಡಿಮೆ ಮಾಡಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಪ್ರತಿಯೊಬ್ಬರಲ್ಲಿ ನಿರಂತರವಾಗಿ ಇರಬೇಕು ಎಂದು ಸೂಚನೆ ಕೊಟ್ಟಿದ್ದಾರೆ.

   ವಿಡಿಯೋ ಸಂವಾದ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಗೌರವ್ ಗುಪ್ತಾ, ಚಂಡಿಘಡ, ಚೆನೈ, ಮಧ್ಯಪ್ರದೇಶದ ಇಂದೋರ್, ಬಿಹಾರದ ಪಟ್ನಾ, ಉತ್ತರಾಖಂಡದ ಡೆಹ್ರಾಡೂನ್‍ಗಳ ಆಯುಕ್ತ/ಜಿಲ್ಲಾಧಿಕಾರಿಗಳು ಕೋವಿಡ್ 19 ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕಾರ್ಯಗಳ ಮಾಹಿತಿ ನೀಡಿದರು. ಕೋವಿಡ್ 19 ಪರೀಕ್ಷೆ ಹೆಚ್ಚಿಸಿರುವುದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡುವುದು, ಕೋವಿಡ್ ಆರೈಕೆ ಕೇಂದ್ರ ತೆರೆದಿರುವುದು,  ಗೃಹ ಸಂಪರ್ಕ ತಡೆಯಲ್ಲಿರುವವರನ್ನು ಗಮನಿಸುವುದು, ಕೋವಿಡ್ ನಿರೋಧಕ ಚಿಕಿತ್ಸೆ ನೀಡುವುದು, ಹೀಗೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಅವರ ಗಮನಕ್ಕೆ ತಂದಿದ್ದಾರೆ.

ಸಂವಾದದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಡಾ.ಗೋಪಿನಾಥ್, ಡಾ.ರೂಪೇಶ್ ಗೋಪಾಲ್, ಡಾ.ಮಹೇಶ್ ಇತರರು ಇದ್ದರು.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...