• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉ.ಪ್ರ: ಮೆಡಿಕಲ್ ಕಾಲೇಜುಗಳ ಸಂಖ್ಯೆಯ ಕುರಿತು ಸುಳ್ಳು ಹೇಳಿದರೇ ಪ್ರಧಾನಿ ಮೋದಿ?

Shivakumar A by Shivakumar A
July 23, 2021
in ದೇಶ, ರಾಜಕೀಯ
0
ಉ.ಪ್ರ: ಮೆಡಿಕಲ್ ಕಾಲೇಜುಗಳ ಸಂಖ್ಯೆಯ ಕುರಿತು ಸುಳ್ಳು ಹೇಳಿದರೇ ಪ್ರಧಾನಿ ಮೋದಿ?
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭಿವೃದ್ದಿ ಕಾರ್ಯಕ್ರಮಗಳ ಶಿಲಾನ್ಯಾಸ ಜೋರಾಗಿಯೇ ಸಾಗಿದೆ. ಖುದ್ದು ಪ್ರಧಾನಮಂತ್ರಿಯೇ ಆಸಕ್ತಿವಹಿಸಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತಿದ್ದಾರೆ. ಇತ್ತೀಚಿಗೆ ಸುಮಾರು ರೂ.744 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. 

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಉತ್ತರ ಪ್ರದೇಶ ವೈದ್ಯಕೀಯ ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ  ಅದ್ಬುತವಾದ ಪ್ರಗತಿ ಕಾಣುತ್ತಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳು, ಏಮ್ಸ್ ಸಂಸ್ಥೆಗಳು ಸೇರಿದಂತೆ ಹಲವು ರೀತಿಯ ಅಭಿವೃದ್ದಿ ಕೆಲಸಗಳು ನಡೆದಿವೆ. ಕೇವಲ ನಾಲ್ಕು ವರ್ಷದ ಹಿಂದೆ ರಾಜ್ಯದಲ್ಲಿ ಒಂದು ಡಜನ್ (ಹನ್ನೆರಡು) ಮೆಡಿಕಲ್ ಕಾಲೇಜುಗಳಿದ್ದವು. ಈಗ ಅವುಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ಇನ್ನೂ ಅನೇಕ ಕಾಲೇಜುಗಳು ನಿರ್ಮಾಣ ಹಂತದಲ್ಲಿವೆ,” ಎಂದಿದ್ದರು. 

Four years back #UttarPradesh had only a dozen medical colleges which have now increased to 4 times and many others are in progress: Prime Minister @narendramodi pic.twitter.com/LHqPKgqWiB

— PIB India (@PIB_India) July 15, 2021

ಉತ್ತರ ಪ್ರದೇಶದಲ್ಲಿ ಕೇವಲ ಹನ್ನೆರಡು ಅಥವಾ ಅದಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಎಂಬ ವಾದವನ್ನು ಮುಂದಿಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಷ್ಟೇ ಅಲ್ಲ, ಇದಕ್ಕೂ ಮೊದಲು ಯೋಗಿ ಆದಿತ್ಯನಾಥ್ ಸರ್ಕಾರದ ಹಲವು ಉನ್ನತ ಮಟ್ಟದ ಅಧಿಕಾರಿಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ.

ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬ ಕಾರಣಕ್ಕೇನೋ, ವೈದ್ಯಕೀಯ ಕಾಲೇಜುಗಳ ಕುರಿತಾಗಿರುವ ಅಂಕಿ ಸಂಖ್ಯೆಗಳು ಉತ್ತರ ಪ್ರದೇಶದಲ್ಲಿ ಹಲವು ಬಾರಿ ಕೇಳಿ ಬಂದಿವೆ. ಆದರೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿರುವ ಹಾಗೂ ಅಧಿಕೃತವಾಗಿರುವ ಇತರ ದಾಖಲೆಗಳು ಸತ್ಯವನ್ನು ತೆರೆದಿಟ್ಟಿವೆ. 

ಸರ್ಕಾರದ ಮೂರು ಅಧಿಕೃತ ದಾಖಲೆಗಳು ಸತ್ಯ ಏನೆಂದು ಹೇಳುತ್ತಿವೆ. ಸಂಸತ್ತಿನ ಗ್ರಂಥಾಲಯದಲ್ಲಿರುವ Status of Medical Education in India ಎಂಬ ದಾಖಲೆಯ ಪ್ರಕಾರ 2016-17ನೇ ಸಾಲಿನಲ್ಲಿ ಉತ್ತರ ಪ್ರದೇಶದಲ್ಲಿ 45 ಮೆಡಿಕಲ್  ಕಾಲೇಜುಗಳಿದ್ದವು. ಅವುಗಳಲ್ಲಿ  16  ಸರ್ಕಾರಿ 29 ಖಾಸಗಿ. 

2016 ಜುಲೈ 22ರಂದು ಅಂದಿನ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿದ್ದ ಫಗ್ಗಾನ್ ಸಿಂಗ್ ಕುಲಾಸ್ತೆ ಅವರು ಲೋಕಸಭೆಯಲ್ಲಿ ನೀಡಿರುವ ಉತ್ತರದಲ್ಲಿ, ಭಾರತದಲ್ಲಿ 439 ಮೆಡಿಕಲ್ ಕಾಲೇಜುಗಳಿದ್ದರೆ, ಉತ್ತರ ಪ್ರದೇಶದಲ್ಲಿ 38 ಕಾಲೇಜುಗಳಿವೆ ಎಂದು ಹೇಳಿದ್ದರು. 

ಕೊನೆಯದಾಗಿ ಉತ್ತರ ಪ್ರದೇಶ ಸರ್ಕಾರದ ಅಡಿಯಲ್ಲಿರುವ ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿ ನಿರ್ದೇಶನಾಲಯದ ದಾಖಲೆಯ ಪ್ರಕಾರ  2017ರ ವರೆಗೆ 48 ಸರ್ಕಾರಿ ಮೆಡಿಕಲ್ ಕಾಲೇಜುಗಳು ಹಾಗೂ  24 ಖಾಸಗಿ ಮೆಡಿಕಲ್ ಕಾಲೇಜುಗಳು  ರಾಜ್ಯದಲ್ಲಿ ಅಸ್ಥಿತ್ವದಲ್ಲಿವೆ. 

ಹೀಗೆ ಸರ್ಕರದ ದಾಖಲೆಗಳೇ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೇಳುತ್ತಿರುವ ಸುಳ್ಳುಗಳನ್ನು ಜನರ ಮುಂದೆ ಬೆತ್ತಲೆ ಮಾಡುತ್ತಿವೆ. ಚುನಾವಣೆ ಹತ್ತಿರ ಬಂದಾಗ ಜನರ ಗಮನ ಹಾಗೂ ವೋಟುಗಳನ್ನು ಸೆಳೆಯಲು ಈ ರಿತಿ ಸುಳ್ಳು ಹೇಳಿರುವುದು ಫ್ಯಾಕ್ಟ್ ಚೆಕ್ ಮುಖಾಂತರ ತಿಳಿದು ಬಂದಿದೆ. 

Tags: BJPHospitalsMedical CollegesMedical Education DepartmentUttar Pradeshಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಾಜಿನಾಮೆ ಕುರಿತು ಬಹಿರಂಗವಾಗಿ ಮುಖ್ಯಮಂತ್ರಿಗಳೇ ಮಾತನಾಡಿದ್ದಾರೆ: ಸಚಿವ ಸಿ.ಪಿ.ಯೋಗೀಶ್ವರ್​ ಮಾರ್ಮಿಕ ಹೇಳಿಕೆ

Next Post

9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada