ಮುಂಬೈ: ನಾಗಪುರ – ಬಿಲಾಸ್‌ಪುರ ಮಾರ್ಗದಲ್ಲಿ ಭಾರತದ ೬ನೇ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.
ಮಹಾರಾಷ್ಟ್ರ ಮತ್ತು ಗೋವಾ ಎರಡು ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಲವಾರು ದೊಡ್ಡ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ, ಪ್ರಧಾನಿ ದೇಶದ ಆರನೇ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ನಾಗ್ಪುರ ಮೆಟ್ರೋಗೆ ಚಾಲನೆ ನೀಡಿದರು.ಸುಮಾರು 75,000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು ಎಂದು ಶನಿವಾರ ಸರ್ಕಾರ ಹೇಳಿಕೆ ನೀಡಿದೆ. ಇದರ ಭಾಗವಾಗಿ ಹಲವಾರು ಯೋಜನೆಗಳು ಆರಂಭವಾಗಲಿವೆ. ಗೋವಾದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಲು ಸಿದ್ಧವಾಗಿರುವ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.
ಭಾರತದ ಆರನೇ ವಂದೇ ಭಾರತ್ ಎಕ್ಸ್ಪ್ರೆಸ್ ಬಿಲಾಸ್‌ಪುರ – ನಾಗ್ಪುರ ಮಾರ್ಗಗಳ ನಡುವೆ ಓಡಲಿದೆ. ಪ್ರಧಾನಿ ಮೋದಿ ಜೊತೆಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು. ವಂದೇ ಭಾರತ್ ಎಕ್ಸ್‌ಪ್ರೆಸ್ ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತದೆ. ಶತಾಬ್ದಿ ರೈಲಿನಂತಹ ಪ್ರಯಾಣ ತರಗತಿಗಳನ್ನು ಹೊಂದಿದ್ದು, ಉತ್ತಮ ಸೌಲಭ್ಯಗಳನ್ನು ಹೊಂದಿದೆ. ಈ ಎಕ್ಸ್‌ಪ್ರೆಸ್ ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಈ ರೈಲು ಬಿಲಾಸ್‌ಪುರದಿಂದ ಬೆಳಗ್ಗೆ 6.45ಕ್ಕೆ ಹೊರಟು ಮಧ್ಯಾಹ್ನ 12.15ಕ್ಕೆ ನಾಗಪುರ ತಲುಪಲಿದೆ. ಅದೇ ರೀತಿ, ಮಹಾರಾಷ್ಟ್ರದ ನಾಗಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 7.35 ಕ್ಕೆ ಬಿಲಾಸ್‌ಪುರ ತಲುಪಲಿದೆ. ಈ ರೈಲು ಸುಮಾರು ಐದೂವರೆ ಗಂಟೆಗಳಲ್ಲಿ ದೂರವನ್ನು ತಲುಪುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿರುವ ಭಾರತದ ಮೊದಲ ಸೆಮಿ ಹೈಸ್ಪೀಡ್ ರೈಲು. ಇದು ಪ್ರಯಾಣದ ಸಮಯವನ್ನು 25 ಪ್ರತಿಶತದಿಂದ 45 ಪ್ರತಿಶತದಷ್ಟು ಕಡಿಮೆ ಮಾಡುತ್ತದೆ. ಟಿಕೆಟ್ ಪಡೆದು ಮೆಟ್ರೋ ಹತ್ತಿದ್ದ ಪ್ರಧಾನಿ










