ನವದೆಹಲಿ: ಜೂನ್. 20: ಪ್ರಧಾನಿ ಮೋದಿ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ದೆಹಲಿಯಿಂದ ಅಮೆರಿಕಕ್ಕೆ ತೆರಳಿದರು. ಇದೊಂದು ಮಹತ್ವದ ಪ್ರವಾಸವಾಗಿದ್ದು, ಸಾಕಷ್ಟು ದ್ವಿಪಕ್ಷೀಯ ಒಪ್ಪಂದಗಳಿಗೆ ಇದು ಸಾಕ್ಷಿಯಾಗಲಿದೆ.
ಯೋಗ ದಿನಾಚರಣೆ
ಮುಂದಿನ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ. ನಾಳೆ (ಜೂ.21) ವಿಶ್ವ ಯೋಗ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆಯುವ ಯೋಗ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಶುಕ್ರವಾರ, ಪ್ರಧಾನಿ ಅವರು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ವಲಸಿಗ ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ. ಈ ವೇಳೆ ಅವರು ಯುಎಸ್ ಕಾಂಗ್ರೆಸ್ನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಉದ್ಯಮಿಗಳು ಮತ್ತು ಅನಿವಾಸಿ ಭಾರತೀಯರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ವೈಟ್ ಹೌಸ್ನಲ್ಲಿ ವಿಶೇಷ ಭೋಜನಕೂಟದಲ್ಲೂ ಪ್ರಧಾನಿ ಭಾಗಿಯಾಗಲಿದ್ದಾರೆ.
ಗುರುವಾರ ಯುಎಸ್ ಕಾಂಗ್ರೆಸ್ ಜಂಟಿ ಸದನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಎರಡನೇ ಬಾರಿಗೆ ಯುಎಸ್ ಕಾಂಗ್ರೆಸ್ನಲ್ಲಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್, ಪ್ರಧಾನಿ ಭಾಷಣಕ್ಕೆ ಆಹ್ವಾನವನ್ನು ನೀಡಿದೆ.