2023ರ ರಾಜ್ಯ ವಿಧಾನಸಭಾ ಚುನಾವಣೆಗೆ(karnataka assembly election) ದಿನಗಣನೆ ಶುರುವಾಗಿದ್ದು, ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಚುನಾವಣೆಗೆ ಬೆರಳೆನಿಕೆ ದಿನಗಳಷ್ಟೇ ಬಾಕಿ ಇದ್ದು, ಈ ಮಧ್ಯೆ ಇಂದು ಪ್ರಧಾನಿ ನರೇಂದ್ರ ಮೋದಿ(narendra modi) ಬೆಂಗಳೂರಿಗೆ(bangalore) ಆಗಮಿಸಲಿದ್ದಾರೆ. ಇಂದು ಸಂಜೆ ಮೋದಿ ಸಿಲಿಕಾನ್ ಸಿಟಿಗೆ ಆಗಮಿಸಿ, ನೈಸ್ ರಸ್ತೆಯಿಂದ ಸುಮ್ಮನಹಳ್ಳಿ ಜಂಕ್ಷನ್ವರೆಗೆ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಹೆಜ್ಜೆ ಹೆಜ್ಜೆಗೂ ಖಾಕಿ ಕಾವಲು ಹಾಕಲಾಗಿದೆ. ಹಾಗೂ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಧಾನಿ(prime minister) ನರೇಂದ್ರ ಮೋದಿ 2 ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದು, 6 ಸಮಾವೇಶ, 2 ರೋಡ್ ಶೋಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆ ರಾಜ್ಯದಲ್ಲಿ ಮೋದಿ ಭದ್ರತೆಯ ಸಲುವಾಗಯಿ ಎಲ್ಲಾ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಸಂಚರಿಸುವ ರಸ್ತೆಯುದ್ದಕ್ಕೂ 1 ಸಾವಿರ ಮನೆ ಮತ್ತು ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ಮೋದಿ ರೋಡ್ ಶೋ(road show) ಭದ್ರತೆಗೆ 2,600 ಪೊಲೀಸರ(police) ನಿಯೋಜನೆ ಮಾಡಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120ಕ್ಕೂ ಹೆಚ್ಚು ಪಿಐ, 250 ಪಿಎಸ್ಐ, 2,600ಕ್ಕೂ ಹೆಚ್ಚು ಪಿಸಿಗಳು, ಕೆಎಸ್ಆರ್ಪಿ ಸಿಬ್ಬಂದಿ ಮೋದಿ ರೋಡ್ಶೋ ಭದ್ರತೆಗೆ ನಿಯೋಜಿಸಲಾಗಿದೆ. ಮೋದಿ ರೋಡ್ಶೋ(road show) ವೇಳೆ ರಸ್ತೆ ಬಳಿಯ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗುತ್ತೆ. ರಸ್ತೆಯ ಒಂದು ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಒಟ್ಟು 6 ಕಿ.ಮೀ. ರೋಡ್ ಶೋ ನಡೆಯಲಿದ್ದು ಮೋದಿ ರೋಡ್ ಶೋಗೆ 2 ಲಕ್ಷ ಜನರನ್ನು ಸೇರಿಸಲು ಬಿಜೆಪಿ(BJP) ಸಿದ್ಧತೆ ನಡೆಸಿದೆ.