• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮಾತು ಸುಳ್ಳು: ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ

Share on WhatsAppShare on FacebookShare on Telegram

ಲಡಾಖ್ ಗಡಿ ವಿವಾದವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ಪ್ರಸ್ತಾಪಿಸಿದ್ದಾರೆ. ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ ಎಂದು ಶುಕ್ರವಾರ (ಆಗಸ್ಟ್‌ 25) ವರದಿಯಾಗಿದೆ.

ADVERTISEMENT

ದೇಶದ ಗಡಿ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬುದು ಇಲ್ಲಿರುವ ಪ್ರತಿಯೊಬ್ಬ ನಾಗರಿಕರಿಗೂ ತಿಳಿದಿರುವ ವಿಷಯ. ಪ್ರಧಾನಿ ಮೋದಿ ಸತ್ಯವನ್ನು ಹೇಳುತ್ತಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಲಡಾಖ್ಗೆ ಒಂಬತ್ತು ದಿನಗಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಕೊನೆಯ ದಿನ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿಮ್ಮ ಕಷ್ಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ನಿಮ್ಮೊಂದಿಗೆ ಇರಲಿದೆ. ಅದು ರಕ್ಷಣೆಯ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ್ದ ವಿಷಯಗಳಾಗಿರಬಹುದು. ಲಡಾಖ್ ನೈಸರ್ಗಿಕ ಸಂಪನ್ಮೂಲದಿಂದ ಸಮೃದ್ಧವಾಗಿದೆ. 21ನೇ ಶತಮಾನವು ಸೌರಶಕ್ತಿಯಿಂದ ಕೂಡಿದ್ದು, ಲಡಾಖ್ಗೆ ಯಾವುದೇ ಕೊರತೆ ಕಾಡುತ್ತಿಲ್ಲ ಎಂದು ಹೇಳಿದರು.

ಗೌತಮ್ ಅದಾನಿಗಾಗಿ ನಿಮ್ಮ ನೆಲವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿ ಬಯಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಅದನ್ನು ಬಿಡುವುದಿಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ಟೀಕಿಸಿದ ರಾಹುಲ್, ಕೆಲವರು ತಮ್ಮ ಹೃದಯದಲ್ಲಿರುವುದರ ಬಗ್ಗೆ ಮಾತನಾಡುತ್ತಾರೆ. ಆದರೆ ನಾನು ಇಲ್ಲಿ ನಿಮ್ಮ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿಯಲು ಬಂದಿದ್ದೇನೆ. ಗಾಂಧಿ ಮತ್ತು ಕಾಂಗ್ರೆಸ್ನ ಸಿದ್ಧಾಂತವು ಲಡಾಖ್ ಜನರ ರಕ್ತದಲ್ಲಿ ಮತ್ತು ಡಿಎನ್ಎಯಲ್ಲಿ ಅಡಗಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಆರ್ಎಸ್ಎಸ್ ಹರಡಿದ ದ್ವೇಷವನ್ನು ತೊಲಗಿಸಲು ಭಾರತ್ ಜೋಡೊ ಯಾತ್ರೆ ನಡೆಸಿರುವುದಾಗಿ ಅವರು ಹೇಳಿದರು.

ಕಳೆದ ವಾರ ಲಡಾಖ್ನ ಪಾಂಗೊಂಗ್ ಸರೋವರಕ್ಕೆ ಬೈಕ್ ಸವಾರಿ ಮಾಡಿದ್ದ ರಾಹುಲ್, ಲಡಾಖ್ ಪ್ರದೇಶವನ್ನು ಚೀನಾ ಸ್ವಾಧೀನಪಡಿಸಿಕೊಂಡ ಪರಿಣಾಮ ಜನರು ತಲ್ಲಣಗೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಮತ್ತೊಂದೆಡೆ ದಕ್ಷಿಣ ಆಫ್ರಿಕಾದ ಜೊಹಾನಸ್ಬರ್ಗ್ನಲ್ಲಿ ನಡೆದ ಬ್ರಿಕ್ಸ್ ಶೃಂಗಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗೆ ಗಡಿ ವಿಚಾರದ ಕುರಿತಂತೆ ಮಾತುಕತೆ ನಡೆಸಿದ್ದಾರೆ. ವಾಸ್ತವಿಕ ನಿಯಂತ್ರಣ ರೇಖೆಯುದ್ಧಕ್ಕೂ ಗಡಿ ಸಮಸ್ಯೆಗಳ ಬಗ್ಗೆ ಭಾರತದ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

Tags: ChinaIndialadakhPM Narendra ModiRahul Gandhiಚೀನಾಪ್ರಧಾನಿ ನರೇಂದ್ರ ಮೋದಿರಾಹುಲ್‌ ಗಾಂಧಿಲಡಾಖ್‌
Previous Post

‘ವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

Next Post

ʼಫ್ಯಾಸಿಸ್ಟ್ ಬಿಜೆಪಿʼ ಎಂಬ ಘೋಷಣೆ ಅಪರಾಧವಲ್ಲ: ಯುವತಿ ವಿರುದ್ಧದ FIR ರದ್ದುಪಡಿಸಿದ ಮದ್ರಾಸ್‌ ಹೈಕೋರ್ಟ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ʼಫ್ಯಾಸಿಸ್ಟ್ ಬಿಜೆಪಿʼ ಎಂಬ ಘೋಷಣೆ ಅಪರಾಧವಲ್ಲ: ಯುವತಿ ವಿರುದ್ಧದ FIR ರದ್ದುಪಡಿಸಿದ ಮದ್ರಾಸ್‌ ಹೈಕೋರ್ಟ್

ʼಫ್ಯಾಸಿಸ್ಟ್ ಬಿಜೆಪಿʼ ಎಂಬ ಘೋಷಣೆ ಅಪರಾಧವಲ್ಲ: ಯುವತಿ ವಿರುದ್ಧದ FIR ರದ್ದುಪಡಿಸಿದ ಮದ್ರಾಸ್‌ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada