ಬೆಂಗಳೂರು- ಪ್ರಿನ್ಸಿಪಾಲ್ ಬೈದ್ರು ಅಂತ ವಿದ್ಯಾರ್ಥಿ ಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಠಾಣೆಯಲ್ಲಿ ನಡೆದಿದೆ. ಬೆಂಗಳೂರಿನ ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್ @ ಜೈದ್ (25) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.
ಎಲ್ ಎಲ್ ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದೂವರೆ ವರ್ಷದ ಹಿಂದೆ ರಿಝ್ವಾನ್ ಮದುವೆ ಆಗಿದ್ದನು. ನಿನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟು ಶ್ರೀನಾಥ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ.