ಶಾಲೆಗೆ 10 ನಿಮಿಷ ತಡವಾಗಿ ಆಗಮಿಸದ್ದಕ್ಕಾಗಿ ಕುಪಿತಗೊಂಡ ಪ್ರಂಶುಪಾಲ ಶಿಕ್ಷಕಿಯನ್ನು ಬೂಟಿನಿಂದ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಲಖೀಂಪುರ್ ಖೇರಿಯ ಮಹಂಗು ಖೇರಾ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸದ್ಯ ಶಿಕ್ಷಕಿಯನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರು ಪ್ರಾಂಶುಪಾಲರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಟನೆ ಕುರಿತು ಶಿಕ್ಷಕಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.