• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಉನ್ನತೀಕರಣಕ್ಕೆ ಆದ್ಯತೆ: ಡಾ. ಶರಣ ಪ್ರಕಾಶ್‌ ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು: ಇಲ್ಲಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ.

ADVERTISEMENT

ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ ಡಿಜಿಟಲ್ ಡೆಂಟಿಸ್ಟ್ರಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ Minister Dr. Sharan Prakash Patil ಪಾಟೀಲ್ ಈ ಘೋಷಣೆ ಮಾಡಿದರು.ಇದೇ ಸಂದರ್ಭದಲ್ಲಿ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಪರಂಪರೆಯ ಬಗ್ಗೆಯೂ ಬೆಳಕು ಚೆಲ್ಲಿದರು.

ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗು ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. “1958ರಲ್ಲಿ ಸ್ಥಾಪನೆಯಾದ ಈ ಕಾಲೇಜು, ದಂತ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಆರು ದಶಕಗಳ ಕಾಲ ಸೇವೆ ಒದಗಿಸಿದೆ. ಈ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಈಗ ಎಲ್ಲಾ ರಂಗಗಳಲ್ಲಿ ಆಧುನೀಕರಣದ ಅಗತ್ಯವಿದೆ. ಶೀಘ್ರದಲ್ಲೇ ಈ ಸಂಸ್ಥೆಗೂ ಸುಧಾರಿತ ಉಪಕರಣಗಳು ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಸಚಿವರು ಘೋಷಿಸಿದರು.

ವೈದ್ಯಕೀಯ ಪದವೀಧರರು ವೃತ್ತಿಪರ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ, ಪ್ರತಿಯೊಬ್ಬ ರೋಗಿಯು ವಿಐಪಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮತ್ತು ರೋಗಿಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪರಿಣಾಮಕಾರಿ ಸಂವಹನ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಡಾ.ಪಾಟೀಲ್ ತಿಳಿ ಹೇಳಿದರು.

ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ ಇದೇ ಸಂದರ್ಭದಲ್ಲಿ ಡಾ.ಪಾಟೀಲ್, ಅತ್ಯಾಧುನಿಕ ಡಿಜಿಟಲ್ ಡೆಂಟಿಸ್ಟ್ರಿ ಕೇಂದ್ರವನ್ನು ಉದ್ಘಾಟಿಸಿ “ಇದು CAD/CAM ಸಿಸ್ಟಮ್‌ಗಳು ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ, ದಂತ ವೈದ್ಯಶಾಸ್ತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ,” ಎಂದು ಸಚಿವರು ವಿವರಿಸಿದರು.

ಅದಾನಿ ಫೌಂಡೇಶನ್‌ನ ಸಹಯೋಗದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಕೋನ್ ಬೀಮ್ ಕಂಪ್ಯೂಟೆಡ್ ಟೊಮೊಗ್ರಫಿ (CBCT) ಸೌಲಭ್ಯವನ್ನು ಒಳಗೊಂಡು, ಶಸ್ತ್ರಚಿಕಿತ್ಸೆ ಮತ್ತು ಇಂಪ್ಲಾಂಟಾಲಜಿ ಸೌಲಭ್ಯ ಹೊಂದಿದೆ. ಸುಧಾರಿತ ರೂಟ್ ಕೆನಾಲ್ ಚಿಕಿತ್ಸೆ ಸೌಲಭ್ಯಕ್ಕಾಗಿ ಮೈಕ್ರೊಸ್ಕೋಪಿಕ್ ಎಂಡೋಡಾಂಟಿಕ್ಸ್, ತಂತ್ರಜ್ಞಾನ ದೊರೆಯಲಿದೆ. ಜೊತೆಗೆ ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ತಂತ್ರಜ್ಞಾನದ ಬಳಕೆಯಿಂದ ಹಲ್ಲಿನ ಸೋಂಕುಗಳ ಪತ್ತೆಗೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ.

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅತ್ಯಾಧುನಿಕ, ಸುಧಾರಿತ ಸೌಲಭ್ಯಗಳು ಅತ್ಯುತ್ತಮವಾಗಿವೆ. ದಂತ ವೈದ್ಯಶಾಸ್ತ್ರದಲ್ಲಿನ ಉನ್ನತ ತಂತ್ರಜ್ಞಾನಗಳು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಿಗೆ ನೆರವಾಗಲಿದೆ” ಎಂದು ಡಾ. ಪಾಟೀಲ್‌ ತಿಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಜಿಡಿಸಿ ಮತ್ತು ಆರ್‌ಐ ನಿರ್ದೇಶಕ ಡಾ. ಗಿರೀಶ್ ಗಿರಡ್ಡಿ ಮತ್ತು ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮುಖ್ಯಸ್ಥ, ಡಾ. ಕಿರಣ್ ಉಪಸ್ಥಿತರಿದ್ದರು.

Tags: Education DepartmentMinister Dr. Sharan Prakash PatilPriority for Government Dental College
Previous Post

ದರ್ಶನ್ ಬೆರಳು ಸನ್ನೆ ಅಸಭ್ಯ ನಾ.? ಆಕಸ್ಮಿಕ ನಾ.?

Next Post

ಗಲಭೆ ಪೀಡಿತ ನಾಗಮಂಗಲಕ್ಕೆ ಇಂದು ಹೆಚ್.ಡಿ.ಕೆ ಭೇಟಿ !

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಗಲಭೆ ಪೀಡಿತ ನಾಗಮಂಗಲಕ್ಕೆ ಇಂದು ಹೆಚ್.ಡಿ.ಕೆ ಭೇಟಿ !

ಗಲಭೆ ಪೀಡಿತ ನಾಗಮಂಗಲಕ್ಕೆ ಇಂದು ಹೆಚ್.ಡಿ.ಕೆ ಭೇಟಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada