ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದ್ದು, ಓರ್ವ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿದೆ.
ಫ್ರೀಡಂ ಪಾರ್ಕ್ ಬಳಿ ಇರುವ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯಲ್ಲಿ ನಡೆದ ಮಹತ್ವದ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೈಲಿನಲ್ಲಿ ಮೊಬೈಲ್ ಬಳಕೆ ಸಂಬಂದ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಪರಪ್ಪನ ಅಗ್ರಹಾರ ಜೈಲಿನ ಮಖ್ಯ ಅಧೀಕ್ಷಕ ಸುರೇಶ್ ರನ್ನ ವರ್ಗಾವಣೆ ಮಾಡಲಾಗಿದ್ದು, ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಮ್ಯಾಗೇರಿ ಮತ್ತು ಅಶೋಕ್ ಭಜಂತ್ರಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಇದೇ ಮೊದಲ ಬಾರಿಗೆ ಜೈಲಿನ ಚೀಪ್ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ದರ್ಜೆಯ ಅಧಿಕಾರಿಯನ್ನು ನೇಮಿಸಲು ತೀರ್ಮಾನ ಮಾಡಲಾಗಿದೆ.

ಗೃಹ ಸಚಿವರ ನೇತೃತ್ವದ ನಡೆದ ಈ ಸಭೆಯಲ್ಲಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಾಗಿದ್ದಾರೆ.
ಇನ್ನು ಕಾರಾಗೃಹ ಇಲಾಖೆ ಎಡಿಜಿಪಿ ಬಿ.ದಯಾನಂದ್ ವಿದೇಶ ಪ್ರವಾಸದಲ್ಲಿ ಇರುವುದರಿಂದ ಸಭೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.













