ಮುಂಬೈ: ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು, ಖಾಸಗಿ ಸುದ್ದಿವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಉಂಟು ಮಾಡಿದ್ದು
ಆಟಗಾರರ ಆಯ್ಕೆಯ ಕೆಲವು ಮಾಹಿತಿಗಳನ್ನು ಅವರು ಬಿಚ್ಚಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಕ್ರಿಕೆಟಿಗರು ಮತ್ತು ಬಿಸಿಸಿಐ ಬಗ್ಗೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗಗೊಳಿಸಿದ್ದಾರೆ.
ಚೇತನ್ ಶರ್ಮಾ ಅವರು ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದು, ಕೋಚ್’ಗಳಾದ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಜತೆಗಿನ ಗೌಪ್ಯ ಸಂಭಾಷಣೆಯನ್ನೂ ಅವರು ಬಹಿರಂಗಪಡಿಸಿದ್ದಾರೆ.
80 ರಿಂದ 85 ರಷ್ಟು ಫಿಟ್ ಆಗಿದ್ದರೂ ಆಟಗಾರರು ಕ್ರಿಕೆಟ್‌ಗೆ ಶೀಘ್ರ ಮರಳಲು ಚುಚ್ಚುಮದ್ದು ತೆಗೆದುಕೊಳ್ಳುತ್ತಾರೆ ಎಂದು ಶರ್ಮಾ ಆರೋಪಿಸಿದ್ದಾರೆ.
ಇದು ಮಾತ್ರವಲ್ಲದೆ, ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಬುಮ್ರಾ ಮರಳುವ ಬಗ್ಗೆ ತಮ್ಮ ಮತ್ತು ತಂಡದ ನಿರ್ವಹಣೆಯ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಈಗ ಶರ್ಮಾ ನೀಡಿರುವ ಹೇಳಿಕೆಯ ಪ್ರಕಾರ, ಬುಮ್ರಾ ಪ್ರಸ್ತುತ ತಂಡದಿಂದ ಹೊರಗುಳಿದಿದ್ದು, ನಾಲ್ಕು ಟೆಸ್ಟ್‌ಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ಆಸ್ಟ್ರೇಲಿಯಾ ವಿರುದ್ಧದ ನಂತರದ ಮೂರು-ಒಡಿಐ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಆಯ್ಕೆದಾರರು ಒಪ್ಪಂದಕ್ಕೆ ಬದ್ಧರಾಗಿರುವುದರಿಂದ ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂಬ ನಿಯಮವಿದೆ. ಹೀಗಾಗಿ, ಬಿಸಿಸಿಐ ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.
ಟಿ–20 ವಿಶ್ವಕಪ್’ನಲ್ಲಿ ತಂಡದ ಕಳಪೆ ಪ್ರದರ್ಶನದ ಬಳಿಕ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ವಜಾ ಮಾಡಿ ಬಳಿಕ ಮತ್ತೆ ಅಧಿಕಾರ ನೀಡಲಾಗಿತ್ತು.