• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ: ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಪ್ರತಿಧ್ವನಿ by ಪ್ರತಿಧ್ವನಿ
July 24, 2026
in Top Story, ಕರ್ನಾಟಕ, ರಾಜಕೀಯ
0
ರಾಜ್ಯ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ: ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

NEET Protest : ಈ ಸರ್ಕಾರ ತೊಲಗುವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ #pratidhvani

 

ನಗರದಲ್ಲಿ ಆರಂಭವಾದ ಮೂರು ದಿನಗಳ 26ನೇ ಇಂಡಿಯನ್ ಇಂಟರ್‌ನ್ಯಾಷನಲ್ ಟ್ರಾವೆಲ್ ಮಾರ್ಟ್ (IITM–2026) ಉದ್ಘಾಟಿಸಿ ಮಾತನಾಡಿದ ಅವರು, “ಈ ಬಾರಿ ಐಐಟಿಎಂನಲ್ಲಿ 850ಕ್ಕೂ ಹೆಚ್ಚು ಪ್ರವಾಸೋದ್ಯಮ ವಲಯದ ಪ್ರತಿನಿಧಿಗಳು, 16 ರಾಜ್ಯಗಳಿಂದ ಆಗಮಿಸಿದ ಪ್ರವಾಸೋದ್ಯಮ ಸಂಸ್ಥೆಗಳು ಹಾಗೂ 26ಕ್ಕೂ ಹೆಚ್ಚು ವಿದೇಶಿ ಪ್ರವಾಸೋದ್ಯಮ ಸಂಸ್ಥೆಗಳು ಭಾಗವಹಿಸಿದ್ದು, ದೇಶೀಯ ಹಾಗೂ ಜಾಗತಿಕ ಪ್ರವಾಸೋದ್ಯಮ ಕ್ಷೇತ್ರದ ನಡುವೆ ಬೃಹತ್ ಬಿ2ಬಿ (Business-to-Business) ಸಭೆಗಳು ನಡೆಯುತ್ತಿವೆ. ಇಂತಹ ವೇದಿಕೆಗಳು ಕರ್ನಾಟಕದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಜಗತ್ತಿನ ಮುಂದೆ ಪರಿಚಯಿಸುವುದರ ಜೊತೆಗೆ ಹೊಸ ಹೂಡಿಕೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ದಾರಿ ಮಾಡಿಕೊಡಲಿವೆ” ಎಂದು ಹೇಳಿದರು.

“ಕರ್ನಾಟಕದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಖಾಸಗಿ ಹೂಡಿಕೆ ಅಗತ್ಯವಿದೆ. ಅದಕ್ಕಾಗಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದೆ. ಸಬ್ಸಿಡಿಗಳು, ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆ ಹಾಗೂ ವಿವಿಧ ಪ್ರೋತ್ಸಾಹಕಗಳ ಮೂಲಕ ಹೂಡಿಕೆದಾರರಿಗೆ ಅನುಕೂಲಕರ ವಾತಾವರಣ ನಿರ್ಮಿಸಲಾಗುತ್ತಿದೆ. ನೀವು ರೆಸಾರ್ಟ್ ನಿರ್ಮಿಸಲು ಬಯಸಿದರೂ, ಸಾಹಸ ಕ್ರೀಡಾ ಸೌಲಭ್ಯ ಸ್ಥಾಪಿಸಲು ಮುಂದಾದರೂ ಅಥವಾ ಕ್ರೂಸ್ ಸೇವೆ ಆರಂಭಿಸಲು ಉದ್ದೇಶಿಸಿದ್ದರೂ ಸರ್ಕಾರ ನಿಮ್ಮೊಂದಿಗೆ ನಿಲ್ಲಲಿದೆ. ಅನಗತ್ಯ ಆಡಳಿತಾತ್ಮಕ ಅಡೆತಡೆಗಳಿಲ್ಲದೆ ಕರ್ನಾಟಕದಲ್ಲಿ ಹೂಡಿಕೆ ಮಾಡಿ ಉದ್ಯಮ ನಡೆಸುವ ಅವಕಾಶವನ್ನು ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ,” ಎಂದರು.

ಕೊನೆಗೂ ಪೇಪರ್ ಲೀಕ್ ಬಗ್ಗೆ ರೊಚ್ಚಿಗೆದ್ದ ಪ್ರಧಾನಿ ನರೇಂದ್ರ ಮೋದಿ..!#pratidhvani  #modi

“ಕರ್ನಾಟಕವು ಪರಂಪರೆ, ಪ್ರಕೃತಿ, ವನ್ಯಜೀವಿ, ಕರಾವಳಿ, ಆಧ್ಯಾತ್ಮಿಕ, ವೆಲ್‌ನೆಸ್ ಹಾಗೂ ಸಾಹಸ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ. ಈ ಸಾಮರ್ಥ್ಯವನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪರಿಣಾಮಕಾರಿಯಾಗಿ ಪರಿಚಯಿಸಲು ಸರ್ಕಾರ ನಿರಂತರವಾಗಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ರೋಡ್‌ಶೋಗಳು, ಟ್ರಾವೆಲ್ ಮಾರ್ಟ್‌ಗಳು ಹಾಗೂ ಹೂಡಿಕೆದಾರರ ಸಮಾವೇಶಗಳನ್ನು ಆಯೋಜಿಸುತ್ತಿದೆ” ಎಂದು ಸಚಿವರು ತಿಳಿಸಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಸಂಪರ್ಕ ವ್ಯವಸ್ಥೆ ಸುಧಾರಣೆ, ಪ್ರವಾಸಿಗರಿಗೆ ಗುಣಮಟ್ಟದ ಸೇವೆ ಹಾಗೂ ಹೂಡಿಕೆ ಸ್ನೇಹಿ ಪರಿಸರ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದ್ದು, ‘ಬ್ರ್ಯಾಂಡ್ ಕರ್ನಾಟಕ’ ಹಾಗೂ ‘ಒನ್ ಸ್ಟೇಟ್, ಮೆನಿ ವರ್ಲ್ಡ್ಸ್’ ಪರಿಕಲ್ಪನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಮತ್ತು ಖಾಸಗಿ ವಲಯದ ಸಹಯೋಗವೇ ಕರ್ನಾಟಕದ ಪ್ರವಾಸೋದ್ಯಮ ಬೆಳವಣಿಗೆಯ ಪ್ರಮುಖ ಶಕ್ತಿಯಾಗಿದ್ದು, ಹೂಡಿಕೆದಾರರು, ಪ್ರವಾಸೋದ್ಯಮ ಉದ್ಯಮಿಗಳು ಹಾಗೂ ಪ್ರವಾಸ ಸಂಸ್ಥೆಗಳು ರಾಜ್ಯದ ಬೆಳವಣಿಗೆಯ ಪಾಲುದಾರರಾಗುವಂತೆ ಸಚಿವರು ಕರೆ ನೀಡಿದರು.

DK Shivakumar: ಕುಮಾರಸ್ವಾಮಿ ನಿಮಗೆ ಕ್ಷಮೆ ಕೇಳಿದ್ದಾರೆ. #pratidhvani

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಮಾತನಾಡಿ,”ಪ್ರವಾಸೋದ್ಯಮವು ಕೇವಲ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುವ ಕ್ಷೇತ್ರವಲ್ಲ. ಅದು ಉದ್ಯೋಗ, ಹೂಡಿಕೆ ಮತ್ತು ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಚಾಲಕವಾಗಿದೆ. ಆದ್ದರಿಂದ ಹೂಡಿಕೆದಾರರು, ಪ್ರವಾಸೋದ್ಯಮ ಉದ್ಯಮ ಮತ್ತು ಸರ್ಕಾರದ ನಡುವೆ ಬಲವಾದ ಸಹಭಾಗಿತ್ವ ನಿರ್ಮಿಸುವ ಮೂಲಕ ಕರ್ನಾಟಕವನ್ನು ದೇಶದ ಅತ್ಯಂತ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್., ಜಂಗಲ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ವ್ಯವಸ್ಥಾಪಕ ನಿರ್ದೇಶಕ ಶಿವರಾಂ ಬಾಬು, ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷರಾದ ಕೆ. ಶ್ಯಾಮರಾಜು ಸೇರಿದಂತೆ ಪ್ರವಾಸೋದ್ಯಮ ವಲಯದ ಗಣ್ಯರು ಉಪಸ್ಥಿತರಿದ್ದರು.

ತಾಕತ್ತಿದ್ರೆ ರಾಹುಲ್ ಗಾಂಧಿನಾ ಜೈಲಲ್ಲಿ ಇಡಬೇಕಿತ್ತು ನೋಡೋಣ..! | pratidhvani
Tags: KarnatakaKarnataka TourismMinister K.J.GeorgePoliticstourism
Previous Post

ಪೇಪರ್ ಲೀಕ್‌ಗೆ ಬ್ರೇಕ್ ಹಾಕಲು ಮೋದಿ ಸರ್ಕಾರದ ಮಾಸ್ಟರ್ ಪ್ಲಾನ್! ತಡರಾತ್ರಿ ದೇಶವನ್ನುದ್ದೇಶಿಸಿ ಮೋದಿ ವಿಡಿಯೋ ಸಂದೇಶ

Next Post

‘ಭ್ರಷ್ಟ ರಾಜಕಾರಣ ಬದಲಾಗದಿದ್ದರೆ ದೇಶಕ್ಕೆ ಅಪಾಯ’: ರವಿ ಕೃಷ್ಣಾರೆಡ್ಡಿ ಎಚ್ಚರಿಕೆ!

Related Posts

Loan amounts cannot be recovered from a pension account: High Court's significant ruling
Top Story

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

by Shivakumar
November 15, 2026
0

ನವದೆಹಲಿ : ಸರ್ಕಾರಿ ನೌಕರರೊಬ್ಬರು (Government employee) ನಿವೃತ್ತರಾದ ಮೇಲೆ, ಅವರು ಬೇರೊಬ್ಬರ ಸಾಲಕ್ಕೆ (Loan) ಜಾಮೀನುದಾರರಾಗಿದ್ದರೆ (Guarantor), ಅಸಲು ಸಾಲಗಾರ ಹಣ ಪಾವತಿಸದಿದ್ದಾಗ ಬ್ಯಾಂಕ್‌ಗಳು ನೇರವಾಗಿ...

Read moreDetails
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Next Post
‘ಭ್ರಷ್ಟ ರಾಜಕಾರಣ ಬದಲಾಗದಿದ್ದರೆ ದೇಶಕ್ಕೆ ಅಪಾಯ’: ರವಿ ಕೃಷ್ಣಾರೆಡ್ಡಿ ಎಚ್ಚರಿಕೆ!

‘ಭ್ರಷ್ಟ ರಾಜಕಾರಣ ಬದಲಾಗದಿದ್ದರೆ ದೇಶಕ್ಕೆ ಅಪಾಯ’: ರವಿ ಕೃಷ್ಣಾರೆಡ್ಡಿ ಎಚ್ಚರಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada