ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷಕ್ಕೆ ಕಡಿವಾಣ ಹಾಕಲು ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ. ಆದರೆ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿ ನಡೆಸಲು ನಿರ್ಧರಿಸಿವೆ.
ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿರುವುದನ್ನು ಖಾಸಗಿ ಶಾಲೆಗಳು ಸ್ವಾಗತಿಸಿವೆ.
ಕರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಜ.6 ರಿಂದ 30ರವರೆಗೆ ಶಾಲಾ-ಕಾಲೇಜುಗಳು ಬಂದ್ ಆಗಿದ್ದವು. ಜ.31ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿತ್ತು. ಮತ್ತೆ ಮೂರು ದಿನ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ರಾಜ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಶಾಲೆಗಳಿಗೆ ಸೂಚನೆ ನೀಡಿದೆ.











